Friday, September 24, 2021
No menu items!
Home Karnataka ನಾಡಹಬ್ಬ ದಸರಾ ಉದ್ಘಾಟಿಸಲಿದ್ದಾರೆ ಜಯದೇವ ಆಸ್ಪತ್ರೆಯ ಡಾ.ಸಿ.ಎನ್.ಮಂಜುನಾಥ್

ನಾಡಹಬ್ಬ ದಸರಾ ಉದ್ಘಾಟಿಸಲಿದ್ದಾರೆ ಜಯದೇವ ಆಸ್ಪತ್ರೆಯ ಡಾ.ಸಿ.ಎನ್.ಮಂಜುನಾಥ್

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2020 ನ್ನು  ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಸಿ.ಎನ್.ಮಂಜುನಾಥ್ ಅವರು ಉದ್ಘಾಟಿಸಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಶನಿವಾರ ಮಾತನಾಡಿದ ಅವರು ಮಾನ್ಯ ಮುಖ್ಯಮಂತ್ರಿಗಳಾದ  ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮೈಸೂರು ದಸರಾ ಉದ್ಘಾಟನೆಗೆ ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು  ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮೈಸೂರಿನ ಪೌರ ಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್, ಪೊಲೀಸ್ ಕಾನ್ಸ್ ಟೇಬಲ್ ಪಿ.ಕುಮಾರ್  ಹಾಗೂ  ಸಾಮಾಜಿಕ ಕಾರ್ಯಕರ್ತ ಆಯೂಬ್ ಅಹಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಇದೇ ಸಂದರ್ಭ ದಸರ ಮಹೋತ್ಸವ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆಯನ್ನು ಮಾಡಲಾಗುವುದು. ಇದರಲ್ಲಿ ಯಾವುದೇ ವ್ಯತ್ಯಾಸ ಇರದು. ತಂಡದ ಶಿಫಾರಸಿನನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಿದ್ದೇನೆ. ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ 300 ಜನ ಸೇರಿದಂತೆ ಯಾವೆಲ್ಲ ನಿಯಮಗಳನ್ನು ವಿಧಿಸಲಾಗಿದೆಯೋ ಅದರಂತೆಯೇ ಕಾರ್ಯಕ್ರಮವನ್ನು ರೂಪಿಸುತ್ತೇವೆ. ಈ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ದೀಪಾಲಂಕಾರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಇದು ಹೈಪವರ್ ಕಮಿಟಿಯಲ್ಲಿ ತೀರ್ಮಾನವಾಗಿದೆ. ಕಳೆದ ಬಾರಿ ಯಾವ ರೀತಿ ಇತ್ತೋ ಅದೇ ರೀತಿ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿತ್ತು. ಹೀಗಾಗಿ ನೂರಾರು ಕಿ.ಮೀ. ದೂರ ಇರುವ ವ್ಯಾಪ್ತಿಯನ್ನು ಕಡಿತಗೊಳಿಸಿ 50 ಕಿಲೋ ಮೀಟರ್ ಗೆ ಸೀಮಿತಗೊಳಿಸಲಾಗುತ್ತದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments