Saturday, June 19, 2021
No menu items!
Home Bharata ಡ್ರಗ್ಸ್ ಪ್ರಕರಣ; ನಿಟ್ಟುಸಿರು ಬಿಟ್ಟ ಬಾಲಿವುಡ್ ಸ್ಟಾರ್ ದಂಪತಿ

ಡ್ರಗ್ಸ್ ಪ್ರಕರಣ; ನಿಟ್ಟುಸಿರು ಬಿಟ್ಟ ಬಾಲಿವುಡ್ ಸ್ಟಾರ್ ದಂಪತಿ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ನಂತರ ಶುರುವಾದ ಡ್ರಗ್ಸ್ ಜಾಲವನ್ನು ಬೆನ್ನತ್ತುವ ಬೇಟೆಯಲ್ಲಿ ಬಾಲಿವುಡ್ ಹಾಸ್ಯ ನಟಿ ಭಾರ್ತಿ ಸಿಂಗ್ ಮತ್ತು ಆಕೆಯ ಪತಿ ಹರ್ಷ್ ಲಿಂಬಾಚಿಯ ಅವರನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಕಳೆದ ಶನಿವಾರ ಬಂಧನವಾಗಿದ್ದ ಈ ಸ್ಟಾರ್ ದಂಪತಿಗೆ ಇಂದು ಮುಂಬೈ ನ್ಯಾಯಾಲಯದಿಂದ ಷರತ್ತುಬದ್ದ ಜಾಮೀನು ಮಂಜೂರಾಗಿದೆ.

ಕಾಮಿಡಿ ಆಕ್ಟ್ರೆಸ್ ಭಾರ್ತಿ ಸಿಂಗ್ ಅವರ ಮುಂಬೈ ನಿವಾಸದ ಮೇಲೆ ಮಾದಕವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ಶನಿವಾರದಂದು ದಾಳಿ ನಡೆಸಿದ್ದರು. ಈ ವೇಳೆ ಭಾರ್ತಿ ಸಿಂಗ್ ನಿವಾಸದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಾದಕ ವಸ್ತು ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭಾರ್ತಿ ಸಿಂಗ್ ದಂಪತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು.

ಎನ್ ಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ಭಾರ್ತಿ ಸಿಂಗ್ ಮತ್ತು ಆಕೆಯ ಪತಿ ಹರ್ಷ್ ಲಿಂಬಾಚಿಯ ತಾವುಗಳು ಗಾಂಜಾ ಸೇವನೆಯನ್ನು ಮಾಡುವುದಾಗಿ ಒಪ್ಪಿಕೊಂಡಿದ್ದರು.ಈ ಹಿನ್ನೆಲೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ 1986ರ ನಿಯಮಗಳ ಅಡಿ ಭಾರತಿ ಸಿಂಗ್ ಅವರನ್ನು ಬಂಧಿಸಲಾಗಿತ್ತು. ಮತ್ತು ವಿಚಾರಣೆ ವೇಳೆ ಎನ್ ಸಿಬಿ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಸಿಕ್ಕಿದ್ದರಿಂದ ಇವರಿಬ್ಬರ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಇನ್ನು ಈ ಕುರಿತು ಮಾಹಿತಿ ನೀಡಿರುವ ನಟಿ ಭಾರ್ತಿ ಪರ ವಕೀಲ ಏಜಾಜ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೂ ತಲಾ 15,000 ರು ಬಾಂಡ್ ಮತ್ತು ಕರೆದಾಗ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ನೀಡಿದೆ ಎಂದು ಹೇಳಿದ್ದಾರೆ. ಸದ್ಯ ಸುಶಾಂತ್ ಸಿಂಗ್ ಸಾವಿನ ನಂತರ ಹುಟ್ಟಿಕೊಂಡ ಸಿನಿ ಲೋಕದ ಮತ್ತೊಂದು ಮುಖ ಯಾವ ದಿಕ್ಕಿನೆಡೆಗೆ ಹೋಗಿ ನಿಲ್ಲುತ್ತದೆಯೋ ಕಾದು ನೋಡಬೇಕಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments