Friday, May 14, 2021
No menu items!
Home Karnataka ಕೊರೊನಾ ರೂಪಾಂತರ: ಶಾಲೆಗಳ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಏನಂದ್ರು..?

ಕೊರೊನಾ ರೂಪಾಂತರ: ಶಾಲೆಗಳ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಏನಂದ್ರು..?

ಬೆಂಗಳೂರು: ಹೊಸ ವರ್ಷದಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಈ ಬೆನ್ನಲ್ಲೇ ಬ್ರಿಟನ್ ದೇಶದಿಂದ ಹೊಸ ಸ್ವರೂಪದ ಕೊರೋನಾ ವೈರಸ್ ಹಬ್ಬುತ್ತಿದ್ದು, ಜನರನ್ನು ಆತಂಕಕ್ಕೆ ದೂಡಿದೆ. ಈ ಮಧ್ಯೆ ಶಾಲೆ-ಕಾಲೇಜುಗಳನ್ನು ಆರಂಭ ಮಾಡಿದ್ರೆ ಹೇಗೆ ಎಂಬ ಪ್ರಶ್ನೆ ಮೂಡುತ್ತಿದೆ. ಇದಕ್ಕೆ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇನ್ನೊಂದು ವಾರದಲ್ಲಿ SSLC ಮತ್ತು ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟವಾಗಲಿದೆ ಎಂದಿದ್ದಾರೆ.

ವಿಕಾಸಸೌಧದಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್ ಭೀತಿ ಬಗ್ಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಹೆಚ್ಚು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲವೆಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. ಈ ವೈರಸ್ ಬಗ್ಗೆ ಪ್ರತಿದಿನ ರಾಜ್ಯದ ತಜ್ಞರಿಂದ ಅಭಿಪ್ರಾಯಪಡೆದು ಅದರ ಅನುಸಾರವಾಗಿ ಕ್ರಮಗಳನ್ನ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಇದೇ ವೇಳೆ, ಇನ್ನೊಂದು ವಾರದಲ್ಲಿ SSLC ಮತ್ತು ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟವಾಗಲಿದೆ. ಹಾಗೆಯೇ, ಪಠ್ಯ,ಕ್ರಮ (Syllabus) ಕೂಡ ಇದೇ ವಾರ ಬಿಡುಗಡೆಗೊಳಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಡಿಡಿ ಚಂದನ ವಾಹಿನಿಯಲ್ಲಿ ಪಠ್ಯ ಬೋಧನೆ ಮುಂದುವರಿಯಲಿದೆ. ಬಹಿರಂಗ ಸ್ಥಳಗಳಲ್ಲಿ ನಡೆಯುವ ವಿದ್ಯಾಗಮ ಯೋಜನೆ ಕೂಡ ಮುಂದುವರಿಯಲಿದೆ ಎಂದಿದ್ದಾರೆ.

ತರಗತಿಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಶಾಲೆಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಮಾಡಲಾಗಿದೆ. ತರಗತಿಯಲ್ಲಿ ಗರಿಷ್ಠ 15 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಕ್ಕಳು ಗುಂಪುಗೂಡದಂತೆ ನೋಡಿಕೊಳ್ಳುವುದು, ಮಕ್ಕಳು ತಮ್ಮ ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು; ಮಕ್ಕಳಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಪೋಷಕರು ಘೋಷಿಸಿ ಸಹಿ ಮಾಡಿದ ಪತ್ರ ತರಬೇಕು. ಶಾಲೆಗಳ ಆರಂಭ ವಿಚಾರದಲ್ಲಿ ಆಯಾ ಜಿಲ್ಲೆಯ ಪಂಚಾಯತ್ ಸಿಇಒಗಳು ನಾಯಕತ್ವ ವಹಿಸಿಕೊಂಡು ಜವಾಬ್ದಾರಿ ನಿರ್ವಹಿಸಬೇಕು. ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿ ಎಂದಿದ್ದಾರೆ.

ಮಧ್ಯಾಹ್ನ ಬಿಸಿಯೂಟ ಇರುವುದಿಲ್ಲ ಬದಲಿಗೆ ರೇಷನ್ ವಸ್ತುಗಳನ್ನ ಮನೆಗೆ ಕೊಂಡೊಯ್ಯಲು ಅವಕಾಶ ನೀಡಲಾಗಿದೆ. ಶಾಲೆಗಳಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ಮನೆಯಿಂದಲೂ ಪ್ರತ್ಯೇಕವಾಗಿ ನೀರು ತರುವಂತೆ ಸೂಚಿಸಲು ಸಲಹೆ. ಶಾಲಾ ಆವರಣ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಎಲ್ಲಾ ಶಾಲೆಗಳಲ್ಲೂ ಐಸೋಲೇಶನ್ ಕೊಠಡಿ ಇರಬೇಕು. ಆರೋಗ್ಯದಲ್ಲಿ ಏರುಪೇರಾಗಿರುವ ಮಕ್ಕಳಿಗೆ ಅಂಥ ಕೊಠಡಿಗಳು ಮೀಸಲಿಡಬೇಕು ಎಂಬುದು ಮಾರ್ಗಸೂಚಿಯಲ್ಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments