Tuesday, August 3, 2021
No menu items!
Home Latest ಬಿಹಾರದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್: ಮೂವರು ನಕ್ಸಲರ ಬಲಿ

ಬಿಹಾರದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್: ಮೂವರು ನಕ್ಸಲರ ಬಲಿ

ಪಾಟ್ನಾ: ಇಂದು ನಸುಕಿನ ಜಾವ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿ ಮೂವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಬಿಹಾರದ ಗಯಾ ಜಿಲ್ಲೆಯ ಬಾರಾಚಟ್ಟಿ ಅರಣ್ಯ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಭಾನುವಾರ ನಸುಕಿನ ಜಾವ ನಕ್ಸಲ್ ನಿಗ್ರಹ ದಳ ಕಾರ್ಯಾಚರಣೆಗೆ ಗಯಾ ಜಿಲ್ಲೆಯಲ್ಲಿ ಇಳಿದಿತ್ತು. ಬಾರಾಚಟ್ಟಿ ಅರಣ್ಯ ಪ್ರದೇಶದಲ್ಲಿ ನಕ್ಸಲರು ಬೀಡುಬಿಟ್ಟಿರುವ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಾರ್ಯಾಚರಣೆ ಶುರುವಾದ ಕೆಲವೇ ಗಂಟೆಗಳಲ್ಲಿ ನಕ್ಸಲರು ಮುಖಾಮುಖಿಯಾಗಿ ಗುಂಡಿನ ಕಾಳಗ ನಡೆಸಿದ್ದಾರೆ. ಪ್ರತ್ಯುತ್ತರವಾಗಿ ಭದ್ರತಾ ಪಡೆಗಳು ಹಾರಿಸಿದ ಗುಂಡಿಗೆ ಮೂವರು ನಕ್ಸಲರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ನಕ್ಸಲ್ ಪೀಡಿತ ಪ್ರದೇಶವಾಗಿರುವ ಗಯಾ ಜಿಲ್ಲೆ ಪಟನಾ ದಿಂದ 100 ಕಿ.ಮೀ ಅಂತರದಲ್ಲಿದೆ. ಇಂದು ನಸುಕಿನ ಜಾವ ನಕ್ಸಲ್ ನಿಗ್ರಹ ದಳ ಕಾರ್ಯಾಚರಣೆ ಆರಂಭಿಸಿತ್ತು. ಗುಂಡಿನ ದಾಳಿ ಆರಂಭವಾಗಿ ಕೆಲ ಹೊತ್ತಿನ ಬಳಿಕ ಸ್ಥಳ ಪರೀಶೀಲನೆ ನಡೆಸಿದಾಗ ಮೂವರ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಕೋಬ್ರಾ 205ನೆರ ಬೆಟಾಲಿಯನ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.ಈ ಕಾರ್ಯಾಚರಣೆಗೆ ಬಿಹಾರ ಪೊಲೀಸ್ ಸಿಬ್ಬಂದಿ ಸಹ ಸಾಥ್ ನೀಡಿದ್ದರು.ಘಟನಾ ಸ್ಥಳದಲ್ಲಿ ಅಸಾಲ್ಟ್ ರೈಫಲ್ ಮತ್ತು ಇನ್ಸಾಸ್ ರೈಫಲ್ ಗಳು ಪತ್ತೆಯಾಗಿದ್ದು ಭದ್ರತಾ ಪಡೆಗಳು ಅದನ್ನು ವಶಪಡಿಸಿಕೊಂಡಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments