Wednesday, June 16, 2021
No menu items!
Home Bharata ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಸಚಿವರ ವಿರುದ್ಧ ಎಫ್ ಐ ಆರ್

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಸಚಿವರ ವಿರುದ್ಧ ಎಫ್ ಐ ಆರ್

ಬಿಹಾರ : ಮೂರು ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಇಂದು ಮೊದಲ ಹಂತದ ಮತದಾನ ಶುರುವಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದ್ರೆ ಇದನ್ನು ಉಲ್ಲಂಘಿಸಿದ್ದಕ್ಕೆ ಬಿಜೆಪಿ ಸಚಿವರ ಮೇಲೆ ಎಫ್ ಐ ಆರ್ ದಾಖಲಾಗಿದೆ.

ಗಯಾದ ಬಿಜೆಪಿ ಅಭ್ಯರ್ಥಿ ಮತ್ತು ಕೃಷಿ ಸಚಿವ ಪ್ರೇಮ್ ಕುಮಾರ್ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಕ್ಕಾಗಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡ ಜಿಲ್ಲಾಡಳಿತ ಇಂದು ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ. ಗಯಾದ 230 ಪ್ರದೇಶಗಳ ವಲಯ ಮ್ಯಾಜಿಸ್ಟ್ರೇಟ್ ಬಿಪಿನ್ ಕುಮಾರ್ ಅವರು ಕೊಟ್ವಾಲಿ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸಲು ಆದೇಶಿಸಿದ್ದಾರೆ. ಕೊಟ್ವಾಲಿ ಪೊಲೀಸರು, 171 (ಎಫ್)/188,128/130 ಆರ್ಪಿ ಕಾಯ್ದೆ 1951 ರ ಅಡಿಯಲ್ಲಿ ಎಫ್ಐಆರ್ (408/20) ಅನ್ನು ನೋಂದಾಯಿಸಿದ್ದಾರೆ.

ಗಯಾ ಮೂಲದ ಶಾಸಕರಾಗಿರುವ ಪ್ರೇಮ್ ಕುಮಾರ್ ಅವರು ಮತ ಚಲಾಯಿಸಲು ಬೈಸಿಕಲ್ನಲ್ಲಿ ಬಂದಿದ್ದರು. ಈ ವೇಳೆ ತಮ್ಮ ಪಕ್ಷ ಕಮಲದ ಗುರುತಿರುವ ಮಾಸ್ಕ್ ಧರಿಸಿ ಬಂದಿದ್ದರು. ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಮತದಾನದ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಸಚಿವರನ್ನು ತಡೆದರು.

ಮುಖ್ಯ ಚುನಾವಣಾ ಅಧಿಕಾರಿ ಎಚ್.ಆರ್.ಶ್ರೀನಿವಾಸ ಅವರ ಪ್ರಕಾರ, “ಜಿಲ್ಲಾಡಳಿತದ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಕೃಷಿ ಸಚಿವರು ತಮ್ಮ ಪಕ್ಷದ ಗುರುತು ಹೊಂದಿರುವ ಮಾಸ್ಕ್ ಧರಿಸಿ ಮತ ಚಲಾಯಿಸಿದರು. ಮಾತ್ರವಲ್ಲದೆ ಗೆಲುವು ಸಾಧಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ. ಕಮಲದ ಗುರುತಿನ ಮುಖವಾಡ ಧರಿಸಿ ಬೂತ್ಗೆ ಹೋಗಿದ್ದಕ್ಕಾಗಿ ಆತನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಾಗಿದೆ. ಡಿಎಂ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶಿಸಿದ್ದಾರೆ” ಎಂದು ಹೇಳಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments