Saturday, May 15, 2021
No menu items!
Home Bharata ಮೋದಿಯವರ ವಾರಾಣಾಸಿ ಕಚೇರಿಯನ್ನೇ ಮಾರಾಟಕ್ಕಿಟ್ಟವರು ಇದೀಗ ಪೊಲಿಸರ ಅತಿಥಿಗಳು

ಮೋದಿಯವರ ವಾರಾಣಾಸಿ ಕಚೇರಿಯನ್ನೇ ಮಾರಾಟಕ್ಕಿಟ್ಟವರು ಇದೀಗ ಪೊಲಿಸರ ಅತಿಥಿಗಳು

ವಾರಣಾಸಿ: ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿ 2014 ರಲ್ಲಿ ಮೊದಲ ಬಾರಿಗೆ ವಾರಣಾಸಿಯಿಂದ ಲೋಕಸಭೆಗೆ ಆಯ್ಕೆಯಾದರು ನಂತರ 2019 ರಲ್ಲಿ ಮತ್ತೆ ಅದೇ ಕ್ಷೇತ್ರದಿಂದ ಆಯ್ಕೆಯಾದರು. ಅವರ ವಾರಾಣಾಸಿ ಕಚೇರಿಯನ್ನೇ ಮಾರಾಟಕ್ಕಿಟ್ಟವರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಪ್ರಧಾನ ಮಂತ್ರಿಯ ಕಚೇರಿಯನ್ನು ಒಎಲ್ಎಕ್ಸ್ ವೆಬ್ಸೈಟ್ನಲ್ಲಿ ಮಾರಾಟಕ್ಕೆ ಇಡಲಾಗಿದೆ ಎಂಬುದು ನಿನ್ನೆ ನಮ್ಮ ಗಮನಕ್ಕೆ ಬಂದಿದೆ. ಭೆಲಾಪುರ ಪೊಲೀಸ್ ಠಾಣೆಯಲ್ಲಿ ತಕ್ಷಣ ಎಫ್ಐಆರ್ ದಾಖಲಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗಿತ್ತು. ಸಧ್ಯ ಪ್ರಕರಣದಲ್ಲಿ ಭಾಗಿಯಾದ ನಾಲ್ಕು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರ ಪೈಕಿ ಒಬ್ಬ ಮೋದಿಯವರ ಕಚೇರಿಯ ಚಿತ್ರವನ್ನು ತೆಗೆದುಕೊಂಡು ವೆಬ್ಸೈಟ್ನಲ್ಲಿ ಇರಿಸಿದ ವ್ಯಕ್ತಿಯಾಗಿದ್ದಾನೆ. ಈ ಕಚೇರಿ ನಗರದ ಜವಾಹರ್ ನಗರ ಪ್ರದೇಶದಲ್ಲಿದೆ ಮತ್ತು ಇದು ಭೆಲಾಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ ಎಂದು ವಾರಣಾಸಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಅಮಿತ್ ಪಾಠಕ್ ತಿಳಿಸಿದ್ದಾರೆ.

ಲೋಕಸಭಾ ಕ್ಷೇತ್ರ ವಾರಣಾಸಿಯನ್ನು ಪ್ರತಿನಿಧಿಸುವ ಮೋದಿಯವರ ಜನಸಂಪರ್ಕಕಾರ್ಯಲಯ ಚಿತ್ರವನ್ನು ಒಎಲ್ಎಕ್ಸ್ ವೆಬ್ಸೈಟ್ನಲ್ಲಿ ಹಾಕಿ ಇದನ್ನು ಮಾರಾಟಕ್ಕೆ ಇಡಲಾಗಿದೆ ಎಂದು ಆರೋಪಿಗಳು ಜನರನ್ನು ವಂಚಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments