Thursday, August 5, 2021
No menu items!
Home Bharata ಹಾಲಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೊರೋನಾ ರಿಸಲ್ಟ್ ನೆಗೆಟಿವ್

ಹಾಲಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೊರೋನಾ ರಿಸಲ್ಟ್ ನೆಗೆಟಿವ್

ನವದೆಹಲಿ: ಕುಟುಂಬ ಸದಸ್ಯರೊಬ್ಬರಿಗೆ ಕೊರೋನಾ ನೆಗೆಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಭಾರತ ತಂಡದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರ ಕೋವಿಡ್ ವರದಿ ಬಂದಿದ್ದು , ವರದಿಯಲ್ಲಿ ನೆಗೆಟಿವ್ ಎಂದು ಬಂದಿದೆ.

ಸೆಲ್ಫ್ ಐಸೋಲೇಶನ್‌ನಲ್ಲಿದ್ದ ಗಂಭೀರ್ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಅದರ ವರದಿ ಬಂದಿದ್ದು ನೆಗೆಟಿವ್ ವರದಿ ಬಂದಿದೆ. ಹೀಗಾಗಿ ವೈರಸ್‌ನ ಆತಂಕದಿಂದ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಸಂಸದ ಪಾರಾಗಿದ್ದಾರೆ.

ನನ್ನ ಕೋವಿಡ್-19 ಪರೀಕ್ಷೆ ವರದಿ ನೆಗೆಟಿವ್‌ ಬಂದಿದೆ ಎಂಬುದನ್ನು ಸಂತಸದಿಂದ ಹಂಚಿಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆಗಳಿಗಾಗಿ ಧನ್ಯವಾದಗಳು. ಎಲ್ಲರೂ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರೂ ಸುರಕ್ಷಿತವಾಗಿರಿ’ ಎಂದು ಟ್ವೀಟ್‌ ಮಾಡಿದ್ದಾರೆ.

ಕಳೆದ ಶುಕ್ರವಾರವೇ ಗೌತಮ್ ಗಂಭೀರ್ ಟ್ವೀಟ್ ಮೂಲಕ ತಮ್ಮ ನಿವಾಸದಲ್ಲಿ ಸದಸ್ಯರೊಬ್ಬರಿಗೆ ಕೊರೊನಾ ವೈರಸ್ ತಗುಲಿರುವ ವಿಚಾರ ಹಾಗೂ ತಾನು ಐಸೋಲೇಶನ್‌ನಲ್ಲಿರುವ ಸಂಗತಿಯನ್ನು ಬಹಿರಂಗಪಡಿಸಿದ್ದರು. ತನ್ನ ಕೊರೊನಾ ಪರೀಕ್ಷೆಯ ವರದಿಯ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದರು.ಇದೀಗ ವರದಿ ನೆಗೆಟಿವ್ ಬಂದಿದ್ದು ಗಂಭೀರ್ ಫುಲ್ ಖುಷಿಯಾಗಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments