Thursday, May 13, 2021
No menu items!
Home Karnataka ಹೋಮಿಯೋಪತಿಯಲ್ಲೂ ಕೊರೊನಾ ಔಷಧಿ ತಯಾರಿಸಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ

ಹೋಮಿಯೋಪತಿಯಲ್ಲೂ ಕೊರೊನಾ ಔಷಧಿ ತಯಾರಿಸಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ

ಬೆಂಗಳೂರು: ಕೊರೊನಾ ನಿವಾರಣೆಗೆ ಹೋಮಿಯೋಪತಿ ಪದ್ಧತಿಯಲ್ಲೂ ಔಷಧಿ ಆವಿಷ್ಕಾರ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಹೋಮಿಯೋಪತಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಸಂಶೋಧನೆಗಳು ಕಡಿಮೆಯಾಗಿವೆ. ಎಲ್ಲವನ್ನೂ ಬೇರೆ ದೇಶಗಳಿಂದ ತರಿಸಿಕೊಳ್ಳುವಂತಾಗಿದೆ. ಕೊರೊನಾ ನಿಯಂತ್ರಣಕ್ಕೆ ತರಲು ಆರ್ಸೆನಿಕ್ ಆಲ್ಬಂ ಎಂಬ ಹೋಮಿಯೋಪತಿ ಔಷಧಿ ಬಳಕೆಯಲ್ಲಿದೆ. ಆದರೆ ಕೊರೊನಾ ನಿವಾರಣೆಗೆ ಬೇರೆ ಸಂಸ್ಥೆಗಳು ಔಷಧಿ ತಯಾರಿಸುತ್ತಿರುವಂತೆ ಹೋಮಿಯೋಪತಿಯಲ್ಲೂ ಔಷಧಿ ಕಂಡುಹಿಡಿಯಬೇಕು ಎಂದರು.

ಹೋಮಿಯೋಪತಿ ಪದ್ಧತಿ ಮುಳ್ಳನ್ನು ಮುಳ್ಳಿಂದಲೇ ತೆಗೆಯಬೇಕು ಎಂಬ ತತ್ವವನ್ನು ಆಧರಿಸಿದೆ. ಟೈಫಾಯಿಡ್ ಬಂದಾಗಲೂ ಹೋಮಿಯೋಪತಿ ಬಳಕೆಯಾಗಿತ್ತು. ಇಂತಹ ಪದ್ಧತಿಗೆ ಉತ್ತೇಜನ ನೀಡಬೇಕು. ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ ಗೆ ವಿಶೇಷ ಒತ್ತು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಬ್ಬ ಆಯುಷ್ ವೈದ್ಯರನ್ನು ನಿಯೋಜಿಸಲು ತೀರ್ಮಾನಿಸಿದೆ ಎಂದು ತಿಳಿಸಿದರು.

ಏಳು ಮಂದಿಗೆ ರೂಪಾಂತರಿ ಕೊರೊನಾ

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಯು.ಕೆ.ಯಿಂದ ದೇಶಕ್ಕೆ ಬಂದವರಲ್ಲಿ 107 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಎಲ್ಲರ ಮಾದರಿಗಳನ್ನು ಲ್ಯಾಬ್ ಗಳಲ್ಲಿ ಪರೀಕ್ಷಿಸಲಾಗಿದೆ. ಈ ಪೈಕಿ 20 ಮಂದಿಗೆ ರೂಪಾಂತರಗೊಂಡ ವೈರಾಣು ಸೋಂಕು ತಗುಲಿದೆ ಎಂದು ದೃಢಪಟ್ಟಿದೆ. ದೆಹಲಿಯಲ್ಲಿ 8, ಕರ್ನಾಟಕದಲ್ಲಿ 7 ಜನರಿಗೆ ಈ ಹೊಸ ಬಗೆಯ ವೈರಾಣುವಿನ ಕೊರೊನಾ ಇದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂವರಿಗೆ ಹಾಗೂ ಶಿವಮೊಗ್ಗದಲ್ಲಿ ನಾಲ್ಕು ಜನರಿಗೆ ರೂಪಾಂತರಗೊಂಡ ವೈರಾಣು ಸೋಂಕು ಬಂದಿದೆ ಎಂದು ತಿಳಿಸಿದರು.

ರೂಪಾಂತರಗೊಂಡ ಕೊರೊನಾ ಸೋಂಕಿತರ 39 ಸಂಪರ್ಕಿತ ವ್ಯಕ್ತಿಗಳನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದು, ಅವರಿಗೂ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಆದರೆ ಯಾರಿಗೂ ಸೋಂಕು ತಗುಲಿಲ್ಲ. ಶಿವಮೊಗ್ಗದಲ್ಲಿ 7 ಸಂಪರ್ಕಿತ ವ್ಯಕ್ತಿಗಳ ಪರೀಕ್ಷೆ ಮಾಡಿದ್ದು, ಆ ಪೈಕಿ ಮೂವರಿಗೆ ಕೊರೊನಾ ಪಾಸಿಟಿವ್ ಇದೆ. ಈ ಮೂವರ ಮಾದರಿಗಳ ಸೀಕ್ವಿನ್ಸಿಂಗ್ ಮಾಡಲಾಗುತ್ತಿದೆ ಎಂದು ವಿವರಿಸಿದರು.

ರೂಪಾಂತರಿ ವೈರಾಣುಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಮಾರ್ಗಸೂಚಿಯನ್ನು ಎಲ್ಲರೂ ಪಾಲಿಸಬೇಕು. ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments