Friday, May 14, 2021
No menu items!
Home Karnataka ಹಳ್ಳಿ ಫೈಟ್ (ಪಾರ್ಟ್-2): ಹಳ್ಳಿ ರಾಜಕೀಯದಲ್ಲಿ ಇಂದು ತೆರೆಮರೆ ಪ್ರಚಾರದ ಕಸರತ್ತು

ಹಳ್ಳಿ ಫೈಟ್ (ಪಾರ್ಟ್-2): ಹಳ್ಳಿ ರಾಜಕೀಯದಲ್ಲಿ ಇಂದು ತೆರೆಮರೆ ಪ್ರಚಾರದ ಕಸರತ್ತು

ಬೆಂಗಳೂರು: ಗ್ರಾಮ ಪಂಚಾಯಿತಿ ಮತದಾನಕ್ಕೆ ಇನ್ನು ಕೇವಲ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಪ್ರಚಾರಕ್ಕೆ ಶುಕ್ರವಾರ ಸಂಜೆ ತೆರೆಬಿದ್ದಿದ್ದು ಮನೆಮನೆ ಪ್ರಚಾರ ರಾಜಕೀಯ ಕಸರತ್ತುಗಳ ನಡುವೆಯೇ ಮುಂದುವರಿದಿದೆ.

ರಾಜಕೀಯ ಪಕ್ಷಗಳ ಚಿಹ್ನೆ ಅಡಿಯಲ್ಲಿ ಚುನಾವಣೆ ನಡೆಯದಿದ್ದರೂ ,ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷ ಸಂಘಟನೆಗೆ ತಳಪಾಯ ಎನ್ನುವ ಕಾರಣದಿಂದಾಗಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಬಹಿರಂಗ ಪ್ರಚಾರದಲ್ಲಿ ತೊಡಗಿದ್ದು ರಾಜ್ಯಾದ್ಯಂತ ಕಂಡು ಬಂತು.ಉದ್ಯೋಗ ನಿಮಿತ್ತ ನಗರದಲ್ಲಿ ವಾಸವಿದ್ದವರು ಸಹ ತಮ್ಮ ಸಂಬಂಧಿಗಳ ಪರವಾಗಿ ಮತಯಾಚನೆಗೆ ಗ್ರಾಮಗಳಿಗೆ ಇಳಿದಿದ್ದು ಕಂಡು ಬಂತು.

ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು, ಸ್ವತಂತ್ರ ಅಭ್ಯರ್ಥಿಗಳು ಹಣ, ಮದ್ಯ ಸೇರಿದಂತೆ ವಿವಿಧ ವಸ್ತುಗಳನ್ನು ಹಂಚುವ ಸಾಧ್ಯತೆ ಇದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆದಿದೆ.

ರಾಜ್ಯದ 109 ತಾಲ್ಲೂಕುಗಳ 2709 ಗ್ರಾಮಪಂಚಾಯತ್ ಗಳಿಗೆ ಮತದಾನ ನಡೆಯಲಿದೆ. ಒಟ್ಟು 43,291 ಸ್ಥಾನಗಳ ಪೈಕಿ 39,378 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಚುನಾವಣಾ ಕಣದಲ್ಲಿ 1,05,431 ಅಭ್ಯರ್ಥಿಗಳಿದ್ದಾರೆ. ಇನ್ನು 3697 ಅಭ್ಯರ್ಥಿಗಳು ಇದಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments