Friday, May 14, 2021
No menu items!
Home Karnataka ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯ ನುಡಿದ ಹರಿಪ್ರಸಾದ್..!

ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯ ನುಡಿದ ಹರಿಪ್ರಸಾದ್..!

ಉಡುಪಿ : ಸದ್ಯ ಬೆಂಗಳೂರಿನ ಆರ್ ಆರ್ ನಗರ ಹಾಗೂ ತುಮಕೂರಿನ ಶಿರಾ ಉಪಚುನಾವಣೆ ಕಾವು ಜೋರಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಗೆಲುವಿಗಾಗಿ ಪ್ರಯತ್ನ ನಡೆಸುತ್ತಿವೆ. ಈ ಬೆನ್ನಲ್ಲೇ ಕಾಂಗ್ರೆಸ್ ಎಂಎಲ್ಸಿ ಬಿ ಕೆ ಹರಿಪ್ರಸಾದ್ ಯಡಿಯೂರಪ್ಪ ಅವರ ಸಿಎಂ ಖುರ್ಚಿ ಬಗ್ಗೆ ಮಾತಾನಾಡಿದ್ದಾರೆ.

ಈ ಉಪಚುನಾವಣೆ ನಡೆದ ಬಳಿಕ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಇಳಿಯುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಹರಿಪ್ರಸಾದ್, ಪ್ರಧಾನಿ ಮೋದಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಎಲ್ಲಿಗೆ ಹೋಯಿತು..? ಅದಕ್ಕೆ ರಾಜ್ಯಕ್ಕೆ ಬಂದ ಪಾಲು ಎಷ್ಟು ಎಂಬುದು ಯಾರಿಗೂ ಗೊತ್ತಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 10 ಪೈಸೆ ಬೆಲೆ ಏರಿಕೆಯಾದ್ರು ಪ್ರಧಾನಿ ಮೋದಿಯವರು ಭಾಷಣ ಬಿಗಿಯುತ್ತಿದ್ದರು. ಆದ್ರೆ ಅವರು ಕೊರೊನಾ ಸಮಯದಲ್ಲಿ ಘೋಷಿಸಿದ ಪ್ಯಾಕೇಜ್ ಹಾಸ್ಯಾಸ್ಪದವಾಗಿದೆ. ಅವರಿಗೆ ಆಡಳಿತ ನಡೆಸುವ ನೈತಿಕತೆಯೇ ಇಲ್ಲವೆಂದು ಹೇಳಿದ್ದಾರೆ.

ಈಗಾಗಲೇ ಸಿಎಂ ಬದಲಾವಣೆಯ ಬಗ್ಗೆ ಸಾಕಷ್ಟು ಸುದ್ದಿಗಳು ಕೇಳಿ ಬಂದಿದ್ದವು. ಆ ಬಗ್ಗೆ ಚರ್ಚೆ ನಡೆಯುತ್ತಿವೆ ಎಂಬ ಸುದ್ದಿ ಹರಿದಾಡಿತ್ತು. ಈ ಬೆನ್ನಲ್ಲೆ ಕಾಂಗ್ರೆಸ್ ಎಂಎಲ್ಸಿ ಈ ಹೇಳಿಕೆ ನೀಡಿದ್ದಾರೆ. ಸದ್ಯ ಎಲ್ಲರ ಚಿತ್ತ ಉಪಚುನಾವಣೆಯತ್ತ ನೆಟ್ಟಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments