Wednesday, October 27, 2021
No menu items!
Home Karnataka ಈ ಬಾರಿ ಹಾಸನಾಂಬೆ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಗೊತ್ತಾ..?

ಈ ಬಾರಿ ಹಾಸನಾಂಬೆ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಗೊತ್ತಾ..?

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ಜಾತ್ರಾ ಮಹೋತ್ಸವ ಮುಕ್ತಾಯವಾಗಿದೆ.ನಿನ್ನೆ ದೇವಾಲಯದ ಬಾಗಿಲನ್ನು ಮುಚ್ಚಲಾಗಿದ್ದು, ಇನ್ನುಒಂದು ವರ್ಷ ದೇವಿಯ ದರ್ಶನ ಭಕ್ತರಿಗೆ ಸಿಗುವುದಿಲ್ಲ. ಇಂದು ಜಿಲ್ಲಾಡಳಿತದ ವತಿಯಿಂದ ಕಾಣಿಕೆ ಹುಂಡಿಯ ಎಣಿಕೆ ನಡೆಯಿತು. ಈ ವರ್ಷ ಹಾಸನಾಂಬೆ ದೇವಾಲಯದಲ್ಲಿ 21,34,052 ರೂ. ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕಾಣಿಕೆ ಸಂಗ್ರಹದಲ್ಲಿ ಭಾರಿ ಕುಸಿತವಾಗಿದೆ.

2019ರಲ್ಲಿ ವಿಶೇಷ ದರ್ಶನ, ಲಾಡು ಮಾರಾಟ ಎಲ್ಲವೂ ಸೇರಿ ಮೂರುವರೆ ಕೋಟಿ ಆದಾಯ ಬಂದಿತ್ತು. ಈ ಬಾರಿ ಭಕ್ತರಿಗೆ ನಿರ್ಬಂಧ ವಿಧಿಸಿದ್ದ ಹಿನ್ನಲೆಯಲ್ಲಿ ಆದಾಯದಲ್ಲಿ ಕುಸಿತ ಕಂಡುಬಂದಿದೆ.

ಈ ಬಾರಿ 12 ದಿನ ಹಾಸನಾಂಬ ದರ್ಶನೋತ್ಸವ ಆಯೋಜಿಸಲಾಗಿತ್ತು ಆದರೆ ದೇವಾಲಯದ ಒಳಗೆ ನೇರ ಸಾರ್ವಜನಿಕ ದರ್ಶನ ಅವಕಾಶ ಇರಲಿಲ್ಲಾ. ಬದಲಿಗೆ ನಗರದ ಕೆಲವೆಡೆ ಎಲ್ಇಡಿ ಪರದೆ ಮೂಲಕ ನೇರ ಪ್ರದರ್ಶನದ ವ್ಯವಸ್ಥೆ ಕಲ್ಪಿಸಲಾಗಿತ್ತು. ಹಾಗೂ ಗಣ್ಯರಿಗೆ ಮಾತ್ರ ದರ್ಶನ ಭಾಗ್ಯ ಕಲ್ಪಿಸಲಾಗಿತ್ತು. ಆದರೆ ಜಾತ್ರೆ ಮುಕ್ತಾಯಕ್ಕೆ ಎರಡು ದಿನ ಬಾಕಿ ಇರುವಾಗ ಸಾರ್ವಜನಿಕ ರು ಹಾಗೂ ಭಕ್ತರ ಮನವಿ ಮೇರೆಗೆ ದೇವಾಲಯಕ್ಕೆ ಪ್ರವೇಶ ಕಲ್ಪಿಸಿ ದರ್ಶನಕ್ಕೆ ಅವಕಾಶನೀಡಲಾಗಿತ್ತು.

ದೇವಾಲಯದ ಆವರಣ ಹಾಗೂ ಮುಂಭಾಗ ಇರಿಸಲಾಗಿದ್ದ ಕಾಣಿಕೆ ಸಂಗ್ರಹ ಹುಂಡಿಗೆ ದರ್ಶನ ಇಲ್ಲವಾದರೂ ಭಕ್ತರು ಹಾಕಿದ್ದ ಕಾಣಿಕೆ 21 ಲಕ್ಷ ಅಗಿದ್ದು. ಕಳೆದ ಬಾರಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿದ ಕಾರಣ 3 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನು ಹುಂಡಿ ಎಣಿಕೆ ಕಾರ್ಯ ನಡೆಯುವಾಗ ಭಕ್ತರ ಕೋರಿಕೆಯ ಪತ್ರಗಳು ಸಿಕ್ಕಿವೆ. ಕಾಣಿಕೆ ಜೊತೆಗೆ ವಿವಿಧ ರೀತಿಯ ನಿವೇದನೆ ಸಲ್ಲಿಸಿ ಚೀಟಿ ಹಾಕಿರುವ ಭಕ್ತರು ಕೌಟುಂಬಿಕ ಸಮಸ್ಯೆ, ಸಾಲ ತೀರಿಸು, ಹಣಕಾಸು ಸಮಸ್ಯೆ ಬಗೆಹರಿಸು ತಾಯೆ ಒಳ್ಳೆ ಕೆಲಸ ಕೊಡಿಸು ಹಾಸನಾಂಬೆ ಎಂದೂ ಹಲವ ಪ್ರಾರ್ಥನೆ ಸಲ್ಲಿಸಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments