Wednesday, October 27, 2021
No menu items!
Home Karnataka ದೊಡ್ಡ ಸ್ಥಾನ ಸಿಕ್ಕಿದೆ ಅಂತ ಅಹಂಕಾರ ಪಡಬಾರದು : ಸಿ ಟಿ ರವಿಗೆ ಮಾಜಿ ಸಿಎಂ...

ದೊಡ್ಡ ಸ್ಥಾನ ಸಿಕ್ಕಿದೆ ಅಂತ ಅಹಂಕಾರ ಪಡಬಾರದು : ಸಿ ಟಿ ರವಿಗೆ ಮಾಜಿ ಸಿಎಂ ಸಲಹೆ

ಬೆಂಗಳೂರು: ಕುಟುಂಬ ರಾಜಕಾರಣದ ವಿಚಾರವಾಗಿ ಟೀಕೆ ಮಾಡಿದ್ದ ಸಿ ಟಿ ರವಿ ವಿರುದ್ಧ ಸರಣಿ ಟ್ವೀಟ್ ಗಳಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕುಟುಕಿದ್ದಾರೆ. ಬಿಜೆಪಿ ಪಕ್ಷದಲ್ಲಿನ ಕುಟುಂಬ ರಾಜಕಾರಣವನ್ನು ತೆಗೆದುಕೊಂಡು ಮಾತನಾಡಿರುವ ಅವರು, ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಸ್ಥಾನಕ್ಕೆ ಅಂದಿನ ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಪುತ್ರ ರಾತ್ರೋರಾತ್ರಿ ಬಂದು ಕುಳಿತಿದ್ದರು. ಜಯ್ ಶಾ ಎಷ್ಟು ಸೆಂಚುರಿ, ಎಲ್ಲಿ ಬಾರಿಸಿ ಕುಳಿತರು ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ತಮ್ಮ ಪಕ್ಷದಲ್ಲಿಯೇ ಈ ರೀತಿ ಕುಟುಂಬ ರಾಜಕಾರಣ ಇದ್ದು ಬೇರೆಯವರತ್ತ ಬೊಟ್ಟುಮಾಡುತ್ತಿರುವ ಅವರ ಅಲ್ಪಜ್ಞಾನಕ್ಕೆ ನನಗೆ ಕನಿಕರ ಬರುತ್ತದೆ. ಜಯ್ ಶಾ ಪದವಿ ಕೂಡ ಅವರಪ್ಪನ ಬಳುವಳಿ ಎಂದು ಹೇಳುವ ಧೈರ್ಯ ಕೂಡ ರವಿಗೆ ಇಲ್ಲ ಎಂದು ಕುಟುಕಿದ್ದಾರೆ.

ಇನ್ನು ಸರಣಿ ಟ್ವೀಟ್ ನಲ್ಲಿ ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ದಿಮತ್ತೆ ಕೂಡ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು. ಆದರೆ, ಸಿ.ಟಿ.ರವಿಯವರ ಮಾತುಗಳು ಆ ಹಂತ ತಲುಪಿದಂತೆ ಭಾಸವಾಗುತ್ತದೆ. ಬಳಸುವ ಭಾಷೆ ಅದನ್ನು ಪ್ರತಿಧ್ವನಿಸುತ್ತಿದೆ ಎಂದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಸಿ.ಟಿ.ರವಿಯವರು ಮಂತ್ರಿ ಪದವಿ ಹೋದದ್ದಕ್ಕೆ ಅಥವಾ ಭವಿಷ್ಯದಲ್ಲಿ ವಂಶವಾಹಿ ರಾಜಕಾರಣದಲ್ಲಿ ಬೆಳೆದು, ಪಕ್ಷದಲ್ಲಿ ತನ್ನ ಬುಡಕತ್ತರಿಸುವ ಆತಂಕದಿಂದ ಹಾಗೂ ಬಿಜೆಪಿಯಲ್ಲಿನ ವೈರುದ್ಯಗಳ ಬಗ್ಗೆ ಧ್ವನಿ ಎತ್ತಲು ಧೈರ್ಯ ಇಲ್ಲದೇ ಬೇರೆ ಪಕ್ಷಗಳ ವಂಶವಾಹಿ ಆಡಳಿತದ ಬಗೆಗೆ ಪರೋಕ್ಷವಾಗಿ ಮಾತನಾಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ ಎಂದಿದ್ದಾರೆ.

ಸುರರು ಕಿನ್ನರರು ಕಿಂಪುರುಷರೆಂಬವರನಾರು ಬಲ್ಲರು ಎನ್ನ ಚಿತ್ತವು ನಿಮ್ಮ ಮೇಲೆ ಸಂಗಯ್ಯಾ, ಎನ್ನ ಚಿತ್ತವು ನಿಮ್ಮ ಮೇಲೆ ಲಿಂಗಯ್ಯಾ, ಕೂಡಲಸಂಗಮದೇವಾ ಅನ್ಯವೆಂಬುದನರಿಯೆನಯ್ಯಾ ಎಂಬ ವಚನದೊಂದಿಗೆ ಕುಟುಕಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments