ಬೆಂಗಳೂರು: ಕಳೆದ 24 ಗಂಟೆಯಲ್ಲಿ ಸುಮಾರು 877 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 920373 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 6 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 12096 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1084 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 897200 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದಿನ 01/01/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@DKShivakumar @Tejasvi_Surya @BYVijayendra @Ramesh_aravind @PuneethRajkumar @CovidIndiaSeva @iaspankajpandey @KarnatakaVarthe @PIBBengaluru @kiranshaw @WFRisinghttps://t.co/Pf7QPZ9Nxe pic.twitter.com/uo2iNgB4MI
— K'taka Health Dept (@DHFWKA) January 1, 2021
ಬೆಂಗಳೂರಿನಲ್ಲಿ ಇಂದು 464 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 388850ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 608 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 377443 ಮಂದಿ ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ 4 ಮಂದಿ ಮೃತಪಟ್ಟಿದ್ದು., ಬೆಂಗಳೂರಿನಲ್ಲಿ ಕೊರೊನಾ ಸಾವಿನ ಸಂಖ್ಯೆ 4321 ಕ್ಕೆ ಏರಿಕೆಯಾಗಿದೆ.