Monday, June 14, 2021
No menu items!
Home Karnataka ಹಬ್ಬದ ಸಡಗರಕ್ಕೆ ಬ್ರೇಕ್ ಹಾಕಲಿದೆಯಾ ವರುಣ..? ಏನಂತಿದೆ ಹವಮಾನ ಇಲಾಖೆ?

ಹಬ್ಬದ ಸಡಗರಕ್ಕೆ ಬ್ರೇಕ್ ಹಾಕಲಿದೆಯಾ ವರುಣ..? ಏನಂತಿದೆ ಹವಮಾನ ಇಲಾಖೆ?

ಬೆಂಗಳೂರು : ದಸರಾ ಹಬ್ಬದ ಹಿನ್ನೆಲೆಯಲ್ಲಿ ಇನ್ನು ಮೂರು ದಿನ ಸಾಲಾಗಿ ರಜೆ ಇದೆ. ಕೊರೊನಾ ಹಿನ್ನೆಲೆಯಲ್ಲಿ ಮನೆ ಬಿಟ್ಟು ಆಚೆ ಹೋಗದ ಅದೆಷ್ಟೋ ಜನ, ಇದೀಗ ರಜೆಯ ನೆಪದಲ್ಲಿ ಔಟಿಂಗ್ ಪ್ಲಾನ್ ಮಾಡಿಕೊಂಡಿದ್ದರೆ ಅಂತವರಿಗೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಇನ್ನೂ ಮೂರು ದಿವಸ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಇದೀಗಾಗಲೇ ಉತ್ತಮ ಮಳೆಯಾಗುತ್ತಿದ್ದು ಮುಂದಿನ 72 ಘಂಟೆಗಳ ಕಾಲ ಗುಡುಗು- ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ . ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ‘ ಯೆಲ್ಲೋ ‘ ಅಲರ್ಟ್ ಘೋಷಿಸಲಾಗಿದೆ .

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು ಹಲವು ಅವಾಂತರಗಳನ್ನೇ ಸೃಷ್ಟಿಸಿದೆ. ರಾಜ್ಯದ ಹಲವೆಡೆ ರೈತರು ಬೆಳೆದಿರುವ ಬೆಳೆಗಳು ಸಂಪೂರ್ಣ ನೆಲಕಚ್ಚಿದ್ದು, ಹಬ್ಬದ ವೇಳೆ ಹಲವು ಸಾಮಾಗ್ರಿಗಳ ದರ ಹೆಚ್ಚಳವಾಗುವ ಸಾಧ್ಯತೆಯಿದೆ.

ಇನ್ನು ಸಿಲಿಕಾನ್ ಸಿಟಿ , ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದು ಸಾಯಂಕಾಲ ಮತ್ತು ರಾತ್ರಿಯ ವೇಳೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನುಳಿದಂತೆ ಬೆ.ಗ್ರಾಮಾಂತರ, ತುಮಕೂರು, ಕೊಡಗು, ಹಾಸನ, ಕೋಲಾರ , ಶಿವಮೊಗ್ಗ , ರಾಮನಗರದಲ್ಲೂ ಮಳೆಯಾಗುವ ಸಾಧ್ಯತೆ ಗಳಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಾದ್ಯಂತ ಕಳೆದ 15 ದಿನಗಳಿಂದ ಭಾರೀ ಮಳೆಯಾಗುತ್ತಿದೆ.ಒಟ್ಟಿನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ , ದಸರಾ ರಜೆಯ ಮೋಜನ್ನು ಸವಿಯಲು ಹೊರಟವರಿಗೆ ಮಳೆ ಅಡ್ಡಿಯಾಗಲಿದೆ. ಉತ್ತರ ಕರ್ನಾಟಕದಲ್ಲಿ ಜನಜೀವನ ಇದೀಗಾಗಲೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಮಳೆ ಹೀಗೆ ಮುಂದುವರೆದರೆ ಮುಂದಿನ ಬದುಕು ಕಠಿಣವಾಗಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments