Monday, December 6, 2021
No menu items!
Home Bharata ಜಾಗತಿಕ ಹಸಿವು ಸೂಚ್ಯಂಕ : 94ನೇ ಸ್ಥಾನದಲ್ಲಿ ಭಾರತ..!

ಜಾಗತಿಕ ಹಸಿವು ಸೂಚ್ಯಂಕ : 94ನೇ ಸ್ಥಾನದಲ್ಲಿ ಭಾರತ..!

ವಿಶ್ವದಾದ್ಯಂತ ಹಸಿವಿನ ಮಟ್ಟ ಮತ್ತು ಅಪೌಷ್ಟಿಕತೆ ಲೆಕ್ಕಹಾಕುವ ಸೂಚ್ಯಂಕವನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದ್ದು, ನೇಪಾಳ ಮತ್ತು ಬಾಂಗ್ಲಾದೇಶ ಕ್ರಮವಾಗಿ 73 ಮತ್ತು 75 ನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ 88 ನೇ ಸ್ಥಾನದಲ್ಲಿದೆ. 107 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94ನೇ ಸ್ಥಾನದಲ್ಲಿದೆ.ಆದರೆ, ನೆರೆಯ ನೇಪಾಳ, ಬಾಂಗ್ಲಾದೇಶ, ಪಾಕಿಸ್ತಾನಕ್ಕಿಂಲೂ ಭಾರತ ಕೆಳಸ್ಥಾನದಲ್ಲಿದೆ.

ವೆಲ್ತುಂಗರ್ಹಿಲ್ಫ್ ಮತ್ತು ಕನ್ಸರ್ನ್ ವರ್ಲ್ಡ್ ವೈಡ್ ಜಂಟಿಯಾಗಿ ಬಿಡುಗಡೆ ಮಾಡಿರುವ ವರದಿ ಪ್ರಕಾರ ಭಾರತ ಹಸಿವಿನ ಮಟ್ಟ 27.2 ರೊಂದಿಗೆ ಗಂಭೀರವಾಗಿದೆ. ವರದಿಯು ವಸ್ತುಸ್ಥಿತಿಯನ್ನು ತೋರಿಸುತ್ತಿದೆ, ದೇಶದಲ್ಲಿನ ಹಸಿವಿನ ಮಟ್ಟವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಹಾರ ಭದ್ರತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹೋರಾಟಗಾರರು ಕೂಗಿ ಹೇಳಿದ್ದಾರೆ.

ಭಾರತ 94ನೇ ಸ್ಥಾನ ಪಡೆದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಾಹುಲ್ ಗಾಂಧಿ, ಸರ್ಕಾರ ತಮ್ಮ ಕೆಲ ‘ವಿಶೇಷ’ ಸ್ನೇಹಿತರ ಜೇಬು ತುಂಬಿಸುವಲ್ಲಿ ನಿರತವಾಗಿರುವುದರಿಂದ ದೇಶದ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 94 ನೇ ಸ್ಥಾನದಲ್ಲಿದೆ, ಪಾಕಿಸ್ತಾನ(88) ಮತ್ತು ಬಾಂಗ್ಲಾದೇಶ (75) ಗಿಂತಲೂ ಕೆಳಗಿರುವ ಗ್ರಾಫಿಕ್ಸ್ ಅನ್ನು ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments