Saturday, June 19, 2021
No menu items!
Home Bharata ಹೈದ್ರಾಬಾದ್ ನಲ್ಲಿ ರಣಭೀಕರ ಮಳೆ; 50 ಮಂದಿ ಸಾವು..!!

ಹೈದ್ರಾಬಾದ್ ನಲ್ಲಿ ರಣಭೀಕರ ಮಳೆ; 50 ಮಂದಿ ಸಾವು..!!

ಹೈದ್ರಾಬಾದ್: ಹೈದ್ರಾಬಾದ್ ನಲ್ಲಿ ವರುಣ ತನ್ನ ರುದ್ರಾವಾತಾರ ತೋರಿಸುತ್ತಿದ್ದು ಭೀಕರ ಮಳೆಗೆ ಸುಮಾರು 50 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವ್ರತವಾಗಿವೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೆಷನ್ ಮತ್ತು ಪೊಲೀಸರು ಸತತ ಕಾರ್ಯಾಚರಣೆ ನಡೆಸುತ್ತಿದ್ದು ಜನರನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಶನಿವಾರದಿಂದಲೇ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ .

ಹೈದರಾಬಾದ್ ನಲ್ಲಿ ತಗ್ಗು ಪ್ರದೇಶಗಳಿಗೆ ಹೆಚ್ಚಾಗಿ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಚುರುಕು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಅಂಜನಿ ಕುಮಾರ್ ತಿಳಿಸಿದ್ದಾರೆ. ಇನ್ನು ತೆಲಂಗಾಣದಲ್ಲಿ ಸುರಿದ ಮಳೆಯಿಂದ ಭಾರೀ ಪ್ರಮಾಣದ ಆಸ್ತಿ – ಪಾಸ್ತಿ ನಶ್ಟವಾಗಿದ್ದು ಸುಮಾರು 50000 ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಮಹಾನಗರ ಪಾಲಿಕೆಯ ವಿಪತ್ತು ನಿರ್ವಹಣಾ ತಂಡ ಮತ್ತು DRF ತಂಡಗಳೂ ಕೂಡಾ ನಿರಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆ ಮಾತ್ರ ಸದ್ಯಕ್ಕೆ ನಿಲ್ಲುವ ಯಾವುದೇ ಮುನ್ಸೂಚನೆ ನೀಡುತ್ತಿಲ್ಲ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments