Friday, September 24, 2021
No menu items!
Home Karnataka ಐಎಂಎ ಕರ್ಮಕಾಂಡ; ಮೂರು ದಿನ ರೋಷನ್ ಬೇಗ್ ಸಿಬಿಐ ವಶಕ್ಕೆ

ಐಎಂಎ ಕರ್ಮಕಾಂಡ; ಮೂರು ದಿನ ರೋಷನ್ ಬೇಗ್ ಸಿಬಿಐ ವಶಕ್ಕೆ

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿರುವ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಮತ್ತೆ ಮೂರು ದಿನ ಸಿಬಿಐ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ರೋಷನ್‌ ಬೇಗ್ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಸೇರಿದ್ದರು. ಹೆಚ್ಚಿನ ವಿಚಾರಣೆಗಾಗಿ ರೋಷನ್ ಬೇಗ್‌ರನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.ಈ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಸಿಬಿಐ ಮನವಿಯನ್ನು ಪುರಸ್ಕರಿಸಿ ರೋಷನ್ ಬೇಗ್ ರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.

ಸಿಬಿಐ ವಿಶೇಷ ನ್ಯಾಯಾಲಯಕ್ಕೆ ರೋಷನ್ ಬೇಗ್ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 28ಕ್ಕೆ ಮುಂದೂಡಿತು. ಜಾಮೀನು ಅರ್ಜಿಗೆ ನವೆಂಬರ್ 27ಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿತು.

ಐಎಂಎ ಬಹುಕೋಟಿ ಪ್ರಕರಣದಲ್ಲಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮನ್ಸೂರ್​ ಖಾನ್​ನಿಂದ ರೋಷನ್​ ಬೇಗ್​ ಸುಮಾರು 200 ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪವಿದೆ. ಇದರ ಜೊತೆಗೆ ಐಷಾರಾಮಿ ಉಡುಗೊರೆಯನ್ನು ಅವರು ಪಡೆದಿದ್ದಾರೆ ಎಂಬ ಆರೋಪ ದಾಖಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments