Saturday, May 15, 2021
No menu items!
Home Latest ನಾಳೆ ಭಾರತ-ಆಸ್ಟ್ರೇಲಿಯಾ ಅಂತಿಮ ಚುಟುಕು ಕದನ; ಕೊಹ್ಲಿ ಮುಡಿಗೇರುತ್ತಾ ಕ್ಲೀನ್ ಸ್ವೀಪ್ ದಾಖಲೆ..?

ನಾಳೆ ಭಾರತ-ಆಸ್ಟ್ರೇಲಿಯಾ ಅಂತಿಮ ಚುಟುಕು ಕದನ; ಕೊಹ್ಲಿ ಮುಡಿಗೇರುತ್ತಾ ಕ್ಲೀನ್ ಸ್ವೀಪ್ ದಾಖಲೆ..?

ಸಿಡ್ನಿ: ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಕೈತಪ್ಪಿ ಮುಖಭಂಗ ಅನುಭವಿಸಿದ ನಂತರ ಪುಟಿದೆದ್ದಿರುವ ವಿರಾಟ್ ಕೊಹ್ಲಿ ನಾಯಕತ್ವದ ಪ್ರವಾಸಿ ಭಾರತ ತಂಡ ಟಿ-20 ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದೆ. ಇದೀಗಾಗಲೇ ಚುಟುಕು ಕದನದಲ್ಲಿ ಸರಣಿ ಗೆದ್ದರಿರುವ ಟೀಂ ಇಂಡಿಯಾ ಅತಿಥೇಯ ಆಸ್ಟ್ರೇಲಿಯಾ ತಂಡವನ್ನು ಕ್ಲೀನ್ ಸ್ವೀಪ್ ಮಾಡುವ ಹುಮ್ಮನ್ನಸಿನಲ್ಲಿದೆ.

ಟಿ20 ಸರಣಿಯ ಮೊದಲ ಪಂದ್ಯವನ್ನು 11 ರನ್ ಅಂತರದಿಂದ ಜಯ ಸಾಧಿಸಿದ್ದ ಟೀಂ ಇಂಡಿಯಾ, ಎರಡನೇ ಪಂದ್ಯವನ್ನು 6 ವಿಕೆಟ್ಗಳಿಂದ ಗೆದ್ದು ಬೀಗಿತ್ತು. ಮೂರನೇ ಪಂದ್ಯ ನಾಳೆ ಸಿಡ್ನಿಯಲ್ಲಿ ನಡೆಯಲಿದೆ.

ಸಿಡ್ನಿಯಲ್ಲಿ ನಡೆಯಲಿರುವ ಅಂತಿಮ ಟಿ20 ಪಂದ್ಯವನ್ನು ಭಾರತ ಗೆದ್ದರೆ ಟಿ20 ಸರಣಿಯನ್ನು ಭಾರತ ವೈಟ್ ವಾಶ್ ಮಾಡಲಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಅದರದ್ದೇ ನೆಲದಲ್ಲಿ ಟಿ20 ಕ್ರಿಕೆಟ್ನಲ್ಲಿ ಕ್ಲೀನ್ ಸ್ವೀಪ್ ಮಾಡಿದ ಸಾಧನೆಯನ್ನು ಕೊಹ್ಲಿ ಮಾಡಲಿದ್ದಾರೆ. ಈ ಮೂಲಕ ಮಾಜಿ ನಾಯಕ ಎಂಎಸ್ ಧೋನಿ ಮಾಡಿದ ಸಾಧನೆಗೆ ಸಮನಾದ ಸಾಧನೆಯನ್ನು ಕೊಹ್ಲಿ ಮಾಡಿದಂತಾಗಲಿದೆ.

ಆಸೀಸ್ ವಿರುದ್ಧ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ ಟಿ20 ಸರಣಿ ಗೆದ್ದ ಮೊದಲ ಭಾರತೀಯ ನಾಯಕ ಎಂಬ ಗರಿಮೆಗೂ ವಿರಾಟ್ ಪಾತ್ರರಾಗಿದ್ದಾರೆ. ಈ ಹಿಂದೆ ನಾಯಕರಾಗಿದ್ದ ಮಹೇಂದ್ರ ಸಿಂಗ್ ಧೋನಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಲ್ಲಿ ಸರಣಿ ಗೆಲುವು ಕಂಡಿದ್ದರು.

ಸಂಭಾವ್ಯ ತಂಡ.
ಭಾರತ: ಕೆ.ಎಲ್ ರಾಹುಲ್ (ವಿ.ಕೀ), ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಯುಜ್ವೇಂದ್ರ ಚಹಲ್, ಜಸ್ಪ್ರಿತ್ ಬುಮ್ರಾ/ದೀಪಕ್ ಚಹರ್, ಶಾರ್ದೂಲ್ ಠಾಕೂರ್.

ಆಸ್ಟ್ರೇಲಿಯಾ: ಡಿ’ಆರ್ಸಿ ಶಾರ್ಟ್/ಅಲೆಕ್ಸ್ ಕೇರಿ, ಮ್ಯಾಥ್ಯೂ ವೇಡ್(ವಿ.ಕೀ-ನಾಯಕ), ಸ್ಟೀವನ್ ಸ್ಮಿತ್, ಮೊಯ್ಸೆಸ್ ಹೆನ್ರಿಕ್ಸ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೋಯ್ನಿಸ್, ಮಿಚೆಲ್ ಸ್ವೆಪ್ಸನ್, ಶಾನ್ ಅಬಾಟ್, ಡೇನಿಯಲ್ ಸ್ಯಾಮ್ಸ್, ಆಂಡ್ರೆ ಟೈ ಹಾಗೂ ಆಡಮ್ ಝಾಂಪ

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments