Friday, May 14, 2021
No menu items!
Home Latest ಸಿಡ್ನಿಯಲ್ಲಿ ಸೋತ ಭಾರತ; ಸರಣಿ ಆಸಿಸ್ ಕೈವಶ

ಸಿಡ್ನಿಯಲ್ಲಿ ಸೋತ ಭಾರತ; ಸರಣಿ ಆಸಿಸ್ ಕೈವಶ

ಸಿಡ್ನಿ: ಇಂದು ಇಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 51 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಆಸ್ಟ್ರೇಲಿಯಾ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್(104) ಆಕರ್ಷಕ ಶತಕ, ಇನ್ನುಳಿದಂತೆ ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಡೇವಿಡ್ ವಾರ್ನರ್(83), ಫಿಂಚ್(60), ಮಾರ್ನಸ್ ಲಬುಶೇನ್(70) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಬಾರಿಸಿದ ಭರ್ಜರಿ ಅರ್ಧಶತಕದ ನೆರವಿನಿಂದ ಕೇವಲ 4 ವಿಕೆಟ್ ಕಳೆದುಕೊಂಡು 389 ರನ್ ಬಾರಿಸಿತ್ತು.

ಗುರಿ ಬೆನ್ನತ್ತಿದ ಭಾರತ ತಂಡ ಆರಂಭದಲ್ಲಿ ಶಿಖರ್ ಧವನ್ 30 ರನ್ ಗಳಿಸಿ ಹಝಲ್ ವುಡ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ನಂತರ ಆರಂಭಿಕ ಆಟಗಾರ ಮಾಯಂಕ್ ಅಗರ್ವಾಲ್ 28 ರನ್ ಗಳಿಸಿದ್ದು, ಪ್ಯಾಟ್ ಕಮಿನ್ಸ್ ಬೌಲಿಂಗ್‌ನಲ್ಲಿ ಔಟಾದರು.

ನಂತರ ಟೀಂ ಇಂಡಿಯಾಗೆ ಬೆನ್ನೆಲುಬಾಗಿ ನಿಂತಿದ್ದ ನಾಯಕ ವಿರಾಟ್ ಕೊಹ್ಲಿ (89)ರನ್ ಗಳಿಸಿ ಹಝಲ್ ವುಡ್ ಗೆ ತಮ್ಮ ವಿಕೆಟ್ ಒಪ್ಪಿಸಿದರು. ಕೆ. ಎಲ್. ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಉತ್ತಮ ಜೊತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಕೆ.ಎಲ್. ರಾಹುಲ್ 76 ರನ್ ಗಳಿಸಿದ್ದು ಆಯಡಂ ಝಂಪಾ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಸತತ ವಿಕೆಟ್ ಗಳನ್ನು ಕಳೆದುಕೊಂಡ ಭಾರತ ತಂಡ 9 ವಿಕೆಟ್ ನಷ್ಟಕ್ಕೆ 338 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲಪ್ಪಿಕೊಂಡಿತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments