Saturday, May 15, 2021
No menu items!
Home Latest ಲಡಾಖ್ ಗಡಿ ಬಿಕ್ಕಟ್ಟು ಶಮನದತ್ತ ಭಾರತ- ಚೀನಾ ಮಹತ್ವದ ನಿರ್ಣಯ...!

ಲಡಾಖ್ ಗಡಿ ಬಿಕ್ಕಟ್ಟು ಶಮನದತ್ತ ಭಾರತ- ಚೀನಾ ಮಹತ್ವದ ನಿರ್ಣಯ…!

ನವದೆಹಲಿ : ಲಡಾಖ್ ಗಡಿ ನಿಯಂತ್ರಣ ರೇಖೆಯ ಬಳಿ ಉಲ್ಬಣಗೊಂಡಿದ್ದ ಸಂಘರ್ಷ ಕೊಂಚ ವಿರಾಮದ ಹಾದಿ ಹಿಡಿಯುತ್ತಿದ್ದು ಹಂತಹಂತವಾಗಿ ಸೈನಿಕರನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ಉಭಯ ದೇಶಗಳು ಒಮ್ಮತದ ನಿರ್ಧಾರ ಕೈಗೊಂಡಿವೆ.

ಗಡಿ ವಿವಾದ ಕುರಿತಾಗಿ ಉಭಯ ದೇಶಗಳು ಒಪ್ಪಂದ ಮಾಡಿಕೊಂಡಿದ್ದು ಒಪ್ಪಂದಕ್ಕೆ ಸಹಿ ಹಾಕಿದ ಒಂದು ದಿನದೊಳಗೆ ಶಸ್ತ್ರಾಸ್ತ್ರ ಪಡೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕು. ಪಾಂಗಾಂಗ್‌ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯ ನಿರ್ದಿಷ್ಟ ಪ್ರದೇಶಗಳಲ್ಲಿ ನಿಯೋಜನೆಗೊಂಡಿರುವ ಸೇನಾ ತುಕಡಿಗಳನ್ನು ವಾಪಾಸು ಕರೆಸಿಕೊಂಡು ಅಲ್ಲಿ ಯಥಾಸ್ಥಿತಿ ಕಾಪಾಡಬೇಕು. ಎರಡೂ ಕಡೆಯವರೂ ಖುದ್ದಾಗಿ ಈ ಪ್ರಕ್ರಿಯೆಯನ್ನು ಪರಿಶೀಲಿಸಬೇಕೆಂಬ ಷರತ್ತುಗಳನ್ನೂ ಒಪ್ಪಂದದಲ್ಲಿ ಸೇರಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಭಾರೀ ಸಂಘರ್ಷ ಕ್ಕೆ ಎಡೆಮಾಡಿಕೊಟ್ಟಿದ್ದ ವುವಾದಿತ ಪ್ರದೇಶದಿಂದ ಶೇ 30 ರಷ್ಟು ಸೈನಿಕರನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ಚೈನಾ ಸರ್ಕಾರ ಒಪ್ಪಿಕೊಂಡಿದೆ.ಇನ್ನು 8 ದಿನಗಳ ಒಳಗೆ ಸೇನೆ ಹಿಂದಕ್ಕೆ ಪಡೆಯುವುದಾಗಿ ಚೀನಾ ಹೇಳಿದೆ. ವಾಸ್ತವ ಗಡಿ ನಿಯಂತ್ರಣ ರೇಖೆಗೆ ಸಂಬಂಧಿಸಿದ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ದೀರ್ಘಕಾಲದ ಮಾತುಕತೆ ಬಳಿಕ ಇಂಥದ್ದೊಂದು ಮಹತ್ವದ ನಿರ್ಧಾರಕ್ಕೆ ಬರಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಸದ್ಯ ಗಡಿಯಲ್ಲಿ ಯಾವುದೇ ಅಹಿತಕರ ಮತ್ತು ಪ್ರಚೋದನಕಾರಿ ಘಟನೆಗಳು ನಡೆಯುತ್ತಿಲ್ಲ . ಆದುದರಿಂದ ಸೇನೆ ಹಿಂದಕ್ಕೆ ಪಡೆಯುವುದೂ ಸೇರಿದಂತೆ ಮೂರು ಹಂತಗಳ ಸಂಘರ್ಷರಹಿತ ಪ್ರಸ್ತಾಪಕ್ಕೆ ಭಾರತ ಮತ್ತು ಚೀನಾ ಒಪ್ಪಿಕೊಂಡಿರುವುದಾಗಿ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ಉಭಯ ದೇಶಗಳು ಈ ಪ್ರದೇಶದಲ್ಲಿ ಸುಮಾರು 50000 ಸೈನಿಕರನ್ನು ನಿಯೋಜಿಸಿದ್ದವು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments