Friday, September 24, 2021
No menu items!
Home Bharata ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕಮಲ್ ನಾಥ್

ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕಮಲ್ ನಾಥ್

ಮಧ್ಯಪ್ರದೇಶ: ವಿಧಾನಸಭಾ ಉಪಚುನಾವಣೆಯ ಸ್ಟಾರ್ ಪ್ರಚಾರಕ ಸ್ಥಾನದ ಮಾನ್ಯತೆಯನ್ನು ಚುನಾವಣಾ ಆಯೋಗ ವಜಾ ಪಡಿಸಿದ ಹಿನ್ನೆಲೆಯಲ್ಲಿ, ಇದನ್ನ ಪ್ರಶ್ನಿಸಿ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸ್ಟಾರ್‌ ಪ್ರಚಾರಕರಾದ ಮಾಜಿ ಸಿಎಂ ಕಮಲ್ ನಾಥ್ ಅವರು ಹಲವು ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷಕ್ಕೂ ಮುಜುಗರ ತಂದಿದ್ದರು.

ಇದಲ್ಲದೇ ಬಿಜೆಪಿಯ ಮಹಿಳಾ ಅಭ್ಯರ್ಥಿಯ ವಿರುದ್ಧ ಕೀಳುಮಟ್ಟದ ಮಾತುಗಳಿಂದ ಜರಿದಿದ್ದರು. ಬಿಜೆಪಿಯ ಮಹಿಳಾ ಅಭ್ಯರ್ಥಿ ಇಮಾರ್ತಿ ದೇವಿ ಅವರಿಗೆ ʼಐಟಂʼ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೆಲ್ಲವನ್ನೂ ಪರಿಗಣಿಸಿದ ಚುನಾವಣಾ ಆಯೋಗ ಸ್ಟಾರ್ ಪ್ರಚಾರಕ ಸ್ಥಾನದಿಂದ ವಜಾಗೊಳಿಸಿ ಶುಕ್ರವಾರ ಆದೇಶಿಸಿತ್ತು.

ಸ್ಟಾರ್ ಪ್ರಚಾರಕ ಸ್ಥಾನವನ್ನ ಸಿದ್ಧಪಡಿಸುವುದು ರಾಜಕೀಯ ಪಕ್ಷ. ಇದರಲ್ಲಿ ಚುನಾವಣಾ ಆಯೋಗದ ಹಸ್ತಕ್ಷೇಪ ಸಲ್ಲದು ಅಲ್ಲದೇ ಚುನಾವಣಾ ಆಯೋಗವೇ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿರುವ ಕಮಲ್ ನಾಥ್, ಚುನಾವಣಾ ಅಯೋಗದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments