Friday, May 14, 2021
No menu items!
Home Bharata ಕಂಗನಾ ಮತ್ತು ಸೋದರಿ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ..!

ಕಂಗನಾ ಮತ್ತು ಸೋದರಿ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ..!

ಮುಂಬೈ: ಬಾಲಿವುಡ್ ನಟಿ ಕಂಗನಾ ಹಾಗೂ ಆಕೆಯ ಸಹೋದರಿ ರಂಗೋಲಿ ಚಾಂದೆಲ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ ಸೂಚಿಸಿದೆ. ಸಹೋದರಿಯರು ತಮ್ಮ ಟ್ವೀಟ್ಗಳ ಮೂಲಕ ಕೋಮು ದ್ವೇಷವನ್ನು ಹರಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ದೂರಿನ ಕುರಿತು ಎಫ್ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ನ್ಯಾಯಾಲಯ ತಿಳಿಸಿದೆ. ಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟರ್ ಜಯದೇವ್ ವೈ ಘುಲೆ ಈ ಆದೇಶ ನೀಡಿದ್ದಾರೆ.

ವಿನ್ಯಾಸಕ ಹಾಗೂ ಫಿಟ್ನೆಸ್ ತರಬೇತುದಾರ ಮುನ್ನಾವರಲಿ ಸಯ್ಯದ್ ನೀಡಿದ್ದಾರೆ. ಅವರ ಸಹೋದರಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಎರಡು ಸಮುದಾಯಗಳ ನಡುವೆ ಕೋಮು ದ್ವೇಷ ಹರಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಇದಕ್ಕೆ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಒದಗಿಸಲಾಗಿದೆ. ದೂರಿಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಜಯದೇವ್ ಘುಲೆ ಈ ಆದೇಶವನ್ನು ನೀಡಿದ್ದಾರೆ.

ಐಪಿಎಲ್ ಸೆಕ್ಷನ್ 153 ಎ, 295 ಎ ಮತ್ತು 124ಎ ಅನ್ವಯ ದೇಶದ್ರೋಹದ ಆಧಾರದ ಮೇಲೆ ಪ್ರಕರಣ ದಾಖಲಿಸಬೇಕೆಂದು ಸಯ್ಯದ್ ದೂರಿನಲ್ಲಿ ಕೇಳಿಕೊಂಡಿದ್ದರು.

ಸದ್ಯ ತನ್ನ ತವರು ಮನಾಲಿಯಲ್ಲಿರುವ ಕಂಗನಾ, ನವರಾತ್ರಿ ಆಚರಣೆ ಮಾಡುತ್ತಿದ್ದಾರೆ. ನವರಾತ್ರಿ ಕುರಿತು ಶುಭಾಶಯ ತಿಳಿಸಿದ ಅವರು ಇದೇ ವೇಳೆ ತಮ್ಮ ಮೇಲೆ ದಾಖಲಾಗಿರುವ ದೂರಿನ ಕುರಿತು ಉಲ್ಲೇಖಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments