Friday, May 14, 2021
No menu items!
Home Karnataka ನಾಳೆ ಕರ್ನಾಟಕ ಬಂದ್; ಏನಿರುತ್ತೆ..?ಏನಿರಲ್ಲ..?ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನಾಳೆ ಕರ್ನಾಟಕ ಬಂದ್; ಏನಿರುತ್ತೆ..?ಏನಿರಲ್ಲ..?ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ಖಂಡಿಸಿ ಡಿ.5ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್ ನಡೆಯಲಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದಾರೆ.

ಕರವೇ ನಾರಾಯಣಗೌಡ ಬಣ, ಕರವೇ ಪ್ರವೀಣ್ ಶೆಟ್ಟಿ ಬಣ, ರಾಜ್​ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಮುಖ್ಯಮಂತ್ರಿ ಚಂದ್ರು, ಬಿ.ಟಿ.ಲಲಿತಾನಾಯಕ್ ಸೇರಿ ಹಲವು ಸಾಹಿತಿಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ಸಂಪೂರ್ಣ ಸ್ತಬ್ಧವಾಗುವ ಸಾಧ್ಯತೆ ನಿಚ್ಚಳವಾಗಿದೆ.

ಕಾರ್ಮಿಕ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿರುವುದರಿಂದ ಬಹುತೇಕ ಕೈಗಾರಿಕಾ ಕಂಪನಿಗಳು ಬಂದ್ ಆಗಲಿವೆ. ನಾಳೆ ನಡೆಯುವ ಬಂದ್ ಗೆ ಅಟೋ ಸಂಘಟನೆಗಳು ಕೂಡ ಬೆಂಬಲಿಸಿದ್ದು ಅಟೋಗಳು ರಸ್ತೆಗಿಳಿಯುವುದು ಡೌಟು.ಇದೇ ರೀತಿ ಪೆಟ್ರೋಲ್-ಡೀಸೆಲ್ ಬಂಕ್​ಗಳ ಮಾಲೀಕರ ಸಂಘವೂ ಬಂದ್​ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

ಆದರೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಸೇವೆ, ಮೆಡಿಕಲ್ ಸ್ಟೋರ್​ಗಳು, ವೈದ್ಯಕೀಯ ತುರ್ತು ಸೇವೆಗಳು, ಹಾಲು, ಹಣ್ಣು-ತರಕಾರಿ, ದಿನಸಿ ವಸ್ತುಗಳ ಮಾರಾಟ ಎಂದಿನಂತೆ ಇರಲಿವೆ. ರೈಲು ಸೇವೆ, ಮೆಟ್ರೋ ಸಂಚಾರ, ಬಸ್​ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗೋ ಸಾಧ್ಯತೆ ಇಲ್ಲ. ಓಲಾ, ಉಬರ್, ಟ್ಯಾಕ್ಸಿ, ಕ್ಯಾಬ್​ಗಳು ಸಹ ಎಂದಿನಂತೆ ಸಂಚರಿಸಲಿವೆ. ಲಾರಿ ಮಾಲೀಕರ ಸಂಘದಿಂದ ಬಂದ್​ಗೆ ಬೆಂಬಲ ವ್ಯಕ್ತವಾಗದೇ ಇರೋದ್ರಿಂದ ಲಾರಿಗಳು ಎಂದಿನಂತೆ ಸಂಚರಿಸಲಿವೆ. ಬಾರ್ & ರೆಸ್ಟೋರೆಂಟ್, ಥಿಯೇಟರ್​, ಮಲ್ಟಿಪ್ಲೆಕ್ಸ್​ಗಳು, ಮಾಲ್​ಗಳು ಸಹ ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments