Monday, December 6, 2021
No menu items!
Home Karnataka ಕೆಎಎಸ್ ಅಧಿಕಾರಿ ಮನೆಯಲ್ಲಿ ಕೆಜಿ ಗಟ್ಟಲೆ ಚಿನ್ನ, ಲಕ್ಷಾಂತರ ರೂಪಾಯಿ ಹಣ ಪತ್ತೆ..!

ಕೆಎಎಸ್ ಅಧಿಕಾರಿ ಮನೆಯಲ್ಲಿ ಕೆಜಿ ಗಟ್ಟಲೆ ಚಿನ್ನ, ಲಕ್ಷಾಂತರ ರೂಪಾಯಿ ಹಣ ಪತ್ತೆ..!

ಬೆಂಗಳೂರು: ಈ ಹಿಂದೆ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಡಾ. ಬಿ. ಸುಧಾ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಈ ವೇಳೆ ಕೆಜಿ ಗಟ್ಟಲೆ ಚಿನ್ನ, 10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

ಬೆಂಗಳೂರು, ಉಡುಪಿಯ ಹೆಬ್ರಿ, ಮೈಸೂರಿನಲ್ಲಿರುವ ಡಾ. ಸುಧಾ ಅವರ ಮನೆ ಮತ್ತು ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿರುವ ಅವರ ಭವ್ಯ ಬಂಗಲೆಯಲ್ಲಿ ಎಸಿಬಿ ಪರಿಶೀಲನೆ ಮುಂದುವರೆದಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಎಸಿಬಿ ಡಿವೈಎಸ್ಪಿ ಪ್ರತಾಪ್ ರೆಡ್ಡಿ ಮತ್ತು ತಂಡದಿಂದ ಡಾ. ಸುಧಾ ಅವರ ಮನೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಈ ಹಿಂದೆ ಸೊರಬದಲ್ಲಿ ತಹಸೀಲ್ದಾರ್ ಆಗಿದ್ದ ಡಾ. ಸುಧಾ ಶಿವಮೊಗ್ಗದಲ್ಲೇ ಬೇರೆ ಬೇರೆ ತಾಲೂಕಿನಲ್ಲಿ ತಹಸೀಲ್ದಾರ್ ಆಗಿ ಹೆಚ್ಚು ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಿಡಿಎಯಲ್ಲಿ ಮೊದಲು ಡೆಪ್ಯೂಟಿ ಸೆಕ್ರೆಟರಿ ಆಗಿದ್ದು, ನಂತರ ಭೂ ಸ್ವಾಧೀನಾಧಿಕಾರಿಯಾಗಿದ್ದರು. ಸದ್ಯ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಆಡಳಿತಾಧಿಕಾರಿಯಾಗಿರುವ ಡಾ. ಸುಧಾ ಅಲ್ಲಿ ಅಧಿಕಾರ ವಹಿಸಿಕೊಂಡು ದಿನದಿಂದ ಇದುವರೆಗೂ ಕಚೇರಿಗೆ ಹೋಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಈ ಹಿಂದೆ ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು. ಅಲ್ಲದೆ, ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು. ಈ ಹಿನ್ನೆಲೆ ಇಂದು ದಾಳಿ ನಡೆಸಲಾಗುತ್ತಿದೆ.

ಬೆಂಗಳೂರಿನ ಕೊಡಿಗೇಹಳ್ಳಿ ನಿವಾಸ, ಯಲಹಂಕದಲ್ಲಿ ಒಂದು ಫ್ಲ್ಯಾಟ್, ಬ್ಯಾಟರಾಯನಪುರ ಹಾಗೂ ಬಿಇಎಂಎಲ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಜೊತೆಗೆ, ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ. ಮೈಸೂರಿನಲ್ಲಿರುವ ಮನೆ ಮೇಲೂ ಎಸಿಬಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments