Saturday, June 19, 2021
No menu items!
Home Bharata ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಖುಷ್ಬೂ ಬಂಧನ…!

ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಖುಷ್ಬೂ ಬಂಧನ…!

ಚೆನ್ನೈ : ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ ಮಹಿಳೆಯರ ಬಗ್ಗೆ ನೀಡಿದ್ದ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ಅದರಲ್ಲಿ ಪಾಲ್ಗೊಂಡಿದ್ದ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧನದ ನಂತರ ಖುಷ್ಬೂ, ‘ಬಂಧನಕ್ಕೆ ಒಳಗಾಗಿದ್ದೇನೆ.. ಪೊಲೀಸ್ ವ್ಯಾನ್ನಲ್ಲಿ ಕರೆದೊಯ್ಯಲಾಗುತ್ತಿದೆ. ಮಹಿಳೆಯರ ಗೌರವಕ್ಕಾಗಿ ನಮ್ಮ ಕೊನೆ ಉಸಿರಿನವರೆಗೂ ಹೋರಾಡುತ್ತೇವೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ನಾವು ಅವರ ಹಾದಿಯಲ್ಲಿ ಸಾಗುತ್ತಿದ್ದೇವೆ. ಕೆಲವು ಕೆಟ್ಟ ವ್ಯಕ್ತಿಗಳ ದೌರ್ಜನ್ಯಕ್ಕೆ ನಾವು ಮಂಡಿಯೂರುವುದಿಲ್ಲ. ಭಾರತ್ ಮಾತಾ ಕಿ ಜೈ’ ಎಂದು ಖುಷ್ಬೂ ಟ್ವೀಟ್ ಮಾಡಿದ್ದಾರೆ.

ವಿಸಿಕೆ ಪಕ್ಷದ ವಿರುದ್ಧ ಹರಿಹಾಯ್ದಿರುವ ಖುಷ್ಬೂ, ‘ಹೇಡಿ ವಿಸಿಕೆ. ಖುಷಿ ಪಡಬೇಡಿ. ಇದು ನಿಮ್ಮ ವೈಫಲ್ಯ. ನಾವು ಶಕ್ತಿಯುತರು ಎಂಬುದು ಗೊತ್ತಿರುವುದರಿಂದ ನಮ್ಮನ್ನು ಬಂಧಿಸಿದ್ದಾರೆ. ನಾವು ಮಂಡಿಯೂರುವುದಿಲ್ಲ. ಈ ಮಣ್ಣಿನ ಪ್ರತಿ ಹೆಣ್ಣುಮಗಳ ಗೌರವ ಕಾಪಾಡಲು ನರೇಂದ್ರ ಮೋದಿ ಅವರು ಪ್ರತಿ ಹೆಜ್ಜೆಯನ್ನೂ ತೆಗೆದುಕೊಳ್ಳುತ್ತಾರೆ. ಹೇಡಿ ವಿಸಿಕೆ, ಮಹಿಳೆಯನ್ನು ಗೌರವಿಸುವುದು ನಿಮಗೆ ಕಷ್ಟವಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

ವಿಸಿಕೆ ಮುಖ್ಯಸ್ಥ ತೋಳ್ ತಿರುಮಾವಳವನ್ ಇತ್ತೀಚೆಗೆ ಮನುಸ್ಪೃತಿ ಬಗ್ಗೆ ಮಾತನಾಡುತ್ತಾ, ಈ ಕೃತಿ ಮಹಿಳೆಯನ್ನು ಕೀಳಾಗಿ ಕಾಣುತ್ತದೆ. ಮನುಧರ್ಮ ಮಹಿಳೆಯರನ್ನು ವೇಶ್ಯೆಯರಂತೆ ನೋಡುತ್ತದೆ. ಹೀಗಾಗಿ ಮನುಸ್ಪೃತಿಯನ್ನು ಬ್ಯಾನ್ ಮಾಡಬೇಕು ಎಂದಿದ್ರು. ಇದನ್ನು ವಿಪಕ್ಷ ಡಿಎಂಕೆ, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಖಂಡಿಸಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments