Friday, May 14, 2021
No menu items!
Home Latest ತೆಂಡೂಲ್ಕರ್ ದಾಖಲೆ ಮುರಿದ ಕಿಂಗ್ ಕೊಹ್ಲಿ ; ಏಕದಿನ ಕ್ರಿಕೆಟ್ ನಲ್ಲಿ 12 ಸಾವಿರ ರನ್...

ತೆಂಡೂಲ್ಕರ್ ದಾಖಲೆ ಮುರಿದ ಕಿಂಗ್ ಕೊಹ್ಲಿ ; ಏಕದಿನ ಕ್ರಿಕೆಟ್ ನಲ್ಲಿ 12 ಸಾವಿರ ರನ್ ಗಳಿಸಿದ ಕ್ಯಾಪ್ಟನ್ ವಿರಾಟ್

ಕ್ಯಾನ್ಬೆರಾ: ಇಂದು ಇಲ್ಲಿನ ಮನುಕಾ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಸರಣಿಯಲ್ಲಿ ಟೀ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಿಶ್ವದಾಖಲೆ ಬರೆದಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗವಾಗಿ 12 ಸಾವಿರ ರನ್ ಕಲೆಹಾಕುವ ಮೂಲಕ ವಿಶ್ವ ಶ್ರೇಷ್ಠ ಬ್ಯಾಟ್ಸ್‌ಮನ್‌ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಪುಡಿಗಟ್ಟಿದ್ದಾರೆ.

ಇಂದು ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತ್ತು.ಈ ಪಂದ್ಯದಲ್ಲಿ ಬ್ಯಾಟಿಂಗ್ ಗೆ ಇಳಿದ ಕೊಹ್ಲಿ 23 ರನ್‌ ಗಳಿಸುತ್ತಿದ್ದಂತೆಯೇ ಅವರು ಸಚಿನ್‌ ತೆಂಡುಲ್ಕರ್‌ ದಾಖಲೆಯನ್ನು ಮುರಿದಿದ್ದಾರೆ.

ಭರ್ತಿ 250 ಪಂದ್ಯಗಳನ್ನಾಡಿರುವ ಕೊಹ್ಲಿ 241 ಇನ್ನಿಂಗ್ಸ್‌ಗಳಿಂದ 11,977 ರನ್‌ ಬಾರಿಸಿದ್ದರು.ಇಂದು 23 ರನ್ ಕಲೆ ಹಾಕಿ ಅತೀ ವೇಗವಾಗಿ 12000 ರನ್ ಕಲೆ ಹಾಕಿದ ಕೊಹ್ಲಿ ದಾಖಲೆ ಬರೆದಿದ್ದಾರೆ. ಸಚಿನ್‌ 12,000 ರನ್‌ ಗಳಿಸಲು 309 ಪಂದ್ಯಗಳಿಂದ 300 ಇನ್ನಿಂಗ್ಸ್‌ ತೆಗೆದುಕೊಂಡಿದ್ದರು.

ಇದರ ಜೊತೆಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 22 ಸಾವಿರ ರನ್ ಬಾರಿಸಿದ ವಿಶ್ವದಾಖಲೆ ನಿರ್ಮಿಸಿದ್ದರು. ಈ ಮೊದಲು ಸಚಿನ್ ತೆಂಡುಲ್ಕರ್ 493 ಇನಿಂಗ್ಸ್‌ಗಳನ್ನು ಆಡಿ 22 ಸಾವಿರ ರನ್ ಪೂರೈಸಿದ್ದರು. ಆದರೆ ವಿರಾಟ್ ಕೊಹ್ಲಿ ಕೇವಲ 462 ಇನಿಂಗ್ಸ್‌ಗಳನ್ನಾಡಿ ಈ ಸಾಧನೆ ಮಾಡಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments