Saturday, December 4, 2021
No menu items!
Home Bharata ಆರ್ ಸಿಬಿ ಅಬ್ಬರಕ್ಕೆ ದಂಗಾದ ಕೆಕೆಆರ್; ಟಾಪ್ 2 ಸ್ಥಾನಕ್ಕೇರಿದ ಕೊಹ್ಲಿ ಬಾಯ್ಸ್ …

ಆರ್ ಸಿಬಿ ಅಬ್ಬರಕ್ಕೆ ದಂಗಾದ ಕೆಕೆಆರ್; ಟಾಪ್ 2 ಸ್ಥಾನಕ್ಕೇರಿದ ಕೊಹ್ಲಿ ಬಾಯ್ಸ್ …

ಅಬುದಾಬಿ: ಇಲ್ಲಿನ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಆರ್ ಸಿಬಿ ತಂಡ 8ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಇಯಾನ್ ಮಾರ್ಗನ್ ನೇತೃತ್ವದ ಕೆಕೆಆರ್ ತಂಡಕ್ಕೆ ಭಾರೀ ಶಾಕಿಂಗ್ ಕಾಡಿತ್ತು. ಆರಂಭದಲ್ಲೇ ಮಾರಕ ಬೌಲಿಂಗ್ ದಾಳಿ ನಡೆಸಿದ ಕೊಹ್ಲಿ ಬಾಯ್ಸ್ , 3 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಗುರಿಯಾಗಿತ್ತು . ಇಯಾನ್ ಮಾರ್ಗನ್ 34 ಎಸೆತದಲ್ಲಿ 30 ರನ್ ಕಲೆಹಾಕಿದ್ದೇ ತಂಡದ ಅತೀ ಗರಿಷ್ಟ ರನ್. ಉಳಿದ ಯಾವುದೇ ಆಟಗಾರರು ಆರ್ ಸಿಬಿ ಬೌಲಿಂಗ್ ಎದುರು ಎರಡಂಕಿ ಕೂಡಾ ದಾಟಲಾರದೇ ಪೆವಿಲಿಯನ್ ಪೆರೇಡ್ ನಡೆಸಿದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ ಕೆಕೆಆರ್ 8 ವಿಕೆಟ್‌ ನಷ್ಟಕ್ಕೆ ಕೇವಲ 84 ರನ್ ಗಳಿಸಲಷ್ಟೇ ಶಕ್ತವಾಯಿತು.

ಕೆಕೆಆರ್ ನೀಡಿದ್ದ ಅತೀ ಸುಲಭದ ಗುರಿಯನ್ನು ಬೆನ್ನತ್ತಿದ್ದ ಆರ್ ಸಿಬಿ ಉತ್ತಮ ಆರಂಭವನ್ನೇ ಪಡೆಯಿತು. ಆರಂಭಿಕರಾದ ದೆವದತ್ ಪಡಿಕಲ್ ಮತ್ತು ಆ್ಯರೋನ್ ಫಿಂಚ್ 46 ರನ್ ಗಳ ಕಾಣಿಕೆ ನೀಡಿದರೆ ನಂತರ ಜೊತೆಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಗುರುಕೀರತ್ ಸಿಂಗ್ ಕೇವಲ 13.3 ಓವರ್ ನಲ್ಲೇ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು.

ಪಂದ್ಯದ ಆರಂಭದಲ್ಲೇ ಕೆಕೆಆರ್ ಬ್ಯಾಟ್ಸ್‌ಮನ್‌ ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ ಆರ್ಸಿಬಿ ಬೌಲರ್ ಮಹಮ್ಮದ್ ಸಿರಾಜ್ ಮೊದಲ ಎರಡು ಓವರ್‌ಗಳಲ್ಲಿ ಗಳಲ್ಲಿ ಯಾವುದೇ ರನ್ ನೀಡದೆ 3 ವಿಕೆಟ್‌ ಕಬಳಿಸಿ ಕೆಕೆಆರ್ ಪಾಳಯ ಕುಸಿಯುವಂತೆ ಮಾಡಿದರು.

ಇದೀಗ ಕೊಹ್ಲಿ ಬಾಯ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ಆಡಿರುವ 10 ಪಂದ್ಯಗಳಲ್ಲಿ 7ರಲ್ಲಿ ಜಯ ಸಾಧಿಸಿ 14 ಪಾಯಿಂಟ್ ಗಳಿಸಿ ಎರಡನೇ ಸ್ಥಾನದಲ್ಲಿ ವಿರಾಜಮಾನವಾಗಿದೆ. ಮುಂಬೈ ಇಂಡಿಯನ್ಸ್ ತಂಡ ಕೂಡಾ 14 ಪಾಯಿಂಟ್ಸ್ ಗಳಿಸಿದ್ದು ರನ್ ರೇಟ್ ಆಧಾರದ ಮೇಲೆ ಮೊದಲ ಸ್ಥಾನದಲ್ಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments