Saturday, May 15, 2021
No menu items!
Home Karnataka ನಮ್ಮಿಂದಲೇ ಪಕ್ಷ ಎಂದು ಭಾವಿಸಬಾರದು : ಕಾರ್ಯಕರ್ತರಿಗೆ ಸಂದೇಶ ನೀಡಿದ ಡಿಕೆಶಿ

ನಮ್ಮಿಂದಲೇ ಪಕ್ಷ ಎಂದು ಭಾವಿಸಬಾರದು : ಕಾರ್ಯಕರ್ತರಿಗೆ ಸಂದೇಶ ನೀಡಿದ ಡಿಕೆಶಿ

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಉಡುಪಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು , ಇಲ್ಲಿ ಎನ್ಎಸ್ ಯುಐ, ಸೇವಾದಳ, ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ರೈತ ಘಟಕ, ಕಾರ್ಮಿಕ ಘಟಕಗಳು ಕಾರ್ಯಾಚರಿಸುತ್ತಿವೆ. ಎಲ್ಲ ಘಟಕಗಳು ಮುಖ್ಯವೇ. ಎಲ್ಲರೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಕೆಳಗೆ ಕೆಲಸ ಮಾಡಬೇಕಿದೆ. ಎಲ್ಲರೂ ಕೂಡ ಕಡ್ಡಾಯವಾಗಿ ಪಂಚಾಯ್ತಿ ಮಟ್ಟದಲ್ಲಿ ಸಮಿತಿ ಮಾಡಬೇಕು. ಪ್ರತಿಯೊಬ್ಬರು ಬೂತ್ ಮಟ್ಟದಲ್ಲಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಇದೆ ವೇಳೆ ಕಾಂಗ್ರೆಸ್ ಪಕ್ಷದಲ್ಲಿರುವುದು ನಮ್ಮ ಸೌಭಾಗ್ಯ. ಪಕ್ಷ ಇದ್ದರೆ ಮಾತ್ರ ನಾವು ಅಧಿಕಾರಕ್ಕೆ ಬರಲು ಸಾಧ್ಯ. ಯಾರು ಕೂಡ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಬಾರದು. ಇಲ್ಲಿ ಎಲ್ಲರೂ ಕಾರ್ಯಕರ್ತರಾಗಿ ದುಡಿಯಬೇಕು. ನಮ್ಮಿಂದಲೇ ಪಕ್ಷ ಎಂದು ಭಾವಿಸಿದ್ದಾರೆ, ಅದು ಕೇವಲ ಭ್ರಮೆ, ಅದರಿಂದ ಹೊರಗೆ ಬನ್ನಿ ಕಾರ್ಯಕರ್ತರಿಗೆ ಮನವರಿಕೆ ಮಾಡಿದ್ದಾರೆ.

ಪಕ್ಷ ಇಲ್ಲವಾದರೆ ನಾವು ಯಾರು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ನಾವು ನಮ್ಮ ಮನೆ ಸರಿ ಮಾಡಿಕೊಳ್ಳಬೇಕು. ಯಾರು ಕೂಡ ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ನಾನು ಸಹಿಸುವುದಿಲ್ಲ. ಸಮಸ್ಯೆ ಏನೇ ಇದ್ದರೂ ತಮ್ಮ ಬಳಿ ಬಂದು ಮಾತನಾಡಿ, ನನ್ನಿಂದಲೇ ಕಾಂಗ್ರೆಸ್ ಪಕ್ಷ ಎಂದು ತಿಳಿದಿದ್ದರೆ ಅದು ಭ್ರಮೆ. ಅದರಿಂದ ಹೊರಗೆಬಂದು ಕೆಲಸ ಮಾಡಿ. ಕಾಂಗ್ರೆಸ್ ಪಕ್ಷದಲ್ಲಿರುವುದು ನಮ್ಮ ಸೌಭಾಗ್ಯ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments