Saturday, December 4, 2021
No menu items!
Home Karnataka ತೀವ್ರ ಎದೆ ನೋವಿನಿಂದ ಹಿರಿಯ ನಟ ಕೃಷ್ಣಮೂರ್ತಿ ನಾಡಿಗ್ ನಿಧನ

ತೀವ್ರ ಎದೆ ನೋವಿನಿಂದ ಹಿರಿಯ ನಟ ಕೃಷ್ಣಮೂರ್ತಿ ನಾಡಿಗ್ ನಿಧನ

ಬೆಂಗಳೂರು : ಖ್ಯಾತ ಕಿರುತೆರೆ ನಟ ಕೃಷ್ಣಮೂರ್ತಿ ನಾಡಿಗ್ ನಿಧನರಾಗಿದ್ದಾರೆ. ಎದೆ ನೋವಿನಿಂದ ಬಳಲುತ್ತಿದ್ದ ನಾಡಿಗ್ ಅವರನ್ನ ನಿನ್ನೆ ರಾತ್ರಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಕೃಷ್ಣಮೂರ್ತಿ ನಾಡಿಗ್ ಸುಮಾರು 50 ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದವರು. 60ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಭಾಷಣೆ, ಚಿತ್ರಕತೆ ಬರೆದಿದ್ದರು. ಕನ್ನಡದ ಹಲವು ಧಾರವಾಹಿಗಳಲ್ಲಿ ಕೃಷ್ಣಮೂರ್ತಿ ನಾಡಿಗ್ ಅಭಿನಯಿಸಿದ್ದರು. ಮಿಲನ, ದೇವಿ, ಪಾರು ಮುಂತಾದ ಧಾರಾವಾಹಿಗಳಲ್ಲಿ ಕೃಷ್ಣಮೂರ್ತಿ ನಾಡಿಗ್ ನಟಿಸಿದ್ದಾರೆ.

ನಿನ್ನೆ ಸಂಜೆ ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿರುವಾಗಲೇ ಕೃಷ್ಣಮೂರ್ತಿ ನಾಡಿಗ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಇಂದು ಚಾಮರಾಜಪೇಟೆಯ ಚಿತಾಗಾರದಲ್ಲಿ ಕೃಷ್ಣಮೂರ್ತಿ ನಾಡಿಗ್ ಅವರ ಅಂತ್ಯಕ್ರಿಯೆ ನೆರವೇರಲಿದೆ.

ಇವರ ನಿಧನಕ್ಕೆ ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದಾರೆ. ನಿರ್ದೇಶಕ ಟಿ.ಎನ್. ಸೀತಾರಾಮ್ ಸೇರಿದಂತೆ ಕಿರುತೆರೆಯ ಅನೇಕ ನಿರ್ದೇಶಕರು, ನಟರು ಕೃಷ್ಣಮೂರ್ತಿ ನಾಡಿಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments