Friday, May 14, 2021
No menu items!
Home Karnataka ಮುಷ್ಕರದಲ್ಲಿ ಭಾಗಿಯಾದ ಎಷ್ಟು ಜನ ನೌಕರರ ಮೇಲೆ FIR ಆಗಿದೆ..? ಸಾರಿಗೆ ಇಲಾಖೆಯ ಸ್ಪಷ್ಟನೆ

ಮುಷ್ಕರದಲ್ಲಿ ಭಾಗಿಯಾದ ಎಷ್ಟು ಜನ ನೌಕರರ ಮೇಲೆ FIR ಆಗಿದೆ..? ಸಾರಿಗೆ ಇಲಾಖೆಯ ಸ್ಪಷ್ಟನೆ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಎಂದು ನಾಲ್ಕು ದಿನಗಳ ಕಾಲ ಸಾರಿಗೆ ನೌಕರರು ಮುಷ್ಕರ ಮಾಡಿದ್ದರು. ಈ ವೇಳೆ ಕೆಲವು ಕಡೆ ಬಸ್ ಜಖಂಗೊಳಿಸಲಾಗಿತ್ತು. ಈ ಹಿನ್ನೆಲೆ ಮೂವರು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಸಾರಿಗೆ ಇಲಾಖೆ ಸಿಬ್ಬಂದಿ ಮುಷ್ಕರದ ಸಮಯದಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ದಾಖಲಾದ ಕೆಲವೇ ಸಿಬ್ಬಂದಿಗಳ ಮೇಲೆ ಮಾತ್ರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ. ಇನ್ನಾವುದೆ ಸಿಬ್ಬಂದಿ ಮೇಲೆ ಕ್ರಮಕೈಗೊಂಡಿರುವುದಿಲ್ಲ ಎಂದು ಸಾರಿಗೆ ಸಂಸ್ಥೆಗಳ ನಾಲ್ಕು ವಿಭಾಗಗಳ ವ್ಯವಸ್ಥಾಪಕರು ಸ್ಪಷ್ಟನೆ ನೀಡಿದ್ದಾರೆ. ಕೆಎಸ್ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯುವ್ಯ ಸಾರಿಗೆ ವಿಭಾಗಗಳು ವಿನಾಕಾರಣ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲವೆಂದು ಎಂದು ಸ್ಪಷ್ಟಪಡಿಸಿದೆ.

ಕೋಲಾರ ವಿಭಾಗದಲ್ಲಿ 200 ನೌಕರರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಇಲಾಖೆ, ಇದು ಸತ್ಯಕ್ಕೆ ದೂರವಾದದ್ದು. ಕೆಎಸ್ಆರ್ ಟಿಸಿ ವ್ಯಾಪ್ತಿಯಲ್ಲಿ ಒಟ್ಟು 13 ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಮುಷ್ಕರ ಸಮಯದ ನಾಲ್ಕು ದಿನಗಳ ವೇತನ ಪಾವತಿ ಕಡಿತದ ಬಗ್ಗೆಯೂ ಇನ್ನೂ ಯಾವುದೇ ಕ್ರಮ ತೆಗೆದು ಕೊಂಡಿರುವುದಿಲ್ಲ. ಮಂಡಳಿ/ಸರ್ಕಾರದ ಮಟ್ಟದಲ್ಲಿ ಇದರ ಬಗ್ಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೆಎಸ್ ಆರ್ಟಿಸಿ ತಿಳಿಸಿದೆ. ಇನ್ನು ಬೆಮಸಾಸಂಸ್ಥೆ ವ್ಯಾಪ್ತಿಯಲ್ಲಿ ಕಾರ್ಯನಿರತ ಸಿಬ್ಬಂದಿಗಳ ಮೇಲೆ ಹಲ್ಲೆಮಾಡಿರುವ ಒಟ್ಟು 03 ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಮುಷ್ಕರದ ಸಮಯದಲ್ಲಿ ಕರ್ತವ್ಯನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ಎಫ್ಐಆರ್ ದಾಖಲಾದ ಕೆಲವೇ ಸಿಬ್ಬಂದಿಗಳ ಮೇಲೆ ಮಾತ್ರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ. ಬೀದರ್ ವಿಭಾಗದ 5 ಸಿಬ್ಬಂದಿಗಳು, ಕೊಪ್ಪಳ ವಿಭಾಗದ 02 ಸಿಬ್ಬಂದಿಗಳು, ಬಳ್ಳಾರಿ ವಿಭಾಗದ ಓರ್ವ ಸಿಬ್ಬಂದಿ ಹಾಗೂ ವಿಜಯಪುರ ವಿಭಾಗದ ಓರ್ವ ಸಿಬ್ಬಂದಿ ಹೀಗೆ ಒಟ್ಟು 9 ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments