Tuesday, August 3, 2021
No menu items!
Home Karavali ದಲಿತ ಶಾಸಕ ಕುಕ್ಕೆ ಸುಬ್ರಮಣ್ಯ ಸ್ವಾಮಿ ದೇವಾಲಯದ ಸಮಿತಿ ಅಧ್ಯಕ್ಷರಾಗಿ ನಿಯುಕ್ತಿ

ದಲಿತ ಶಾಸಕ ಕುಕ್ಕೆ ಸುಬ್ರಮಣ್ಯ ಸ್ವಾಮಿ ದೇವಾಲಯದ ಸಮಿತಿ ಅಧ್ಯಕ್ಷರಾಗಿ ನಿಯುಕ್ತಿ

ಮಂಗಳೂರು: ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಅಭಿವೃದ್ಧಿ ಸಮಿತಿಯೂ ಇಂದು ಅಧಿಕಾರ ಸ್ವೀಕರಿಸಿದೆ. ಸುಳ್ಯ ಶಾಸಕ ಎಸ್.ಅಂಗಾರರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಧ್ಯಕ್ಷರ ಜೊತೆಗೆ ಆರು ಮಂದಿ ಸದಸ್ಯರು ಕೂಡ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಕ್ಷೇತ್ರಕ್ಕೆ 8 ಮಂದಿ ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನ ಸಮಿತಿಯು ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಮುಖಾಂತರ ರಚನೆಯಾಗುತ್ತಿತ್ತು. ಆ ಬಳಿಕದಲ್ಲಿ ಕ್ಷೇತ್ರದ ಅಭಿವೃದ್ಧಿ, ಚಟುವಟಿಕೆಗಳು ವ್ಯವಸ್ಥಾಪನ ಸಮಿತಿ ಸದಸ್ಯರ, ಸಮಿತಿಯ ನಿರ್ಣಯದಂತೆ ನಡೆಯುತ್ತದೆ. ಆದರೆ ಸರಕಾರ ಈವರೆಗೆ ವ್ಯವಸ್ಥಾಪನಾ ಸಮಿತಿ ರಚನೆಯ ಬಗ್ಗೆ ಯಾವುದೇ ಸೂಚನೆ ನೀಡದಿರುವ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಸಮಿತಿ ಅಥವಾ ಅಭಿವೃದ್ಧಿ ಪ್ರಾಧಿಕಾರದ ರಚನೆಯಾಗುವುದು ಬಹುತೇಕ ಸ್ಪಷ್ಟವಾಗಿತ್ತು.

ಇದರಲ್ಲಿ ಐವರು ಸದಸ್ಯರನ್ನು ಒಳಗೊಳ್ಳಲಿದ್ದು, ಪ್ರಾಧಿಕಾರ ರಚನೆ ಆಗುವಲ್ಲಿಯವರೆಗೆ ಕ್ಷೇತ್ರದ ಆಡಳಿತ, ಅಭಿವೃದ್ಧಿ ಕೆಲಸಗಳ ಬಗ್ಗೆ ಈ ಸಮಿತಿ ಜವಾಬ್ದಾರಿ ವಹಿಸಿಕೊಳ್ಳಲಿದೆ. ಪಿ.ಜಿ.ಎಸ್.ಪ್ರಸಾದ್, ಮನೋಜ್ ರೈ, ಪ್ರಸನ್ನ ತಣೀರುಪಂಥ, ಎಸ್.ಮೋಹನರಾಮ, ವನಜಾ ಭಟ್ ಸುಬ್ರಹ್ಮಣ್ಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿಗಳು ಈ ಸಮಿತಿಯ ಸದಸ್ಯರಾಗಿದ್ದಾರೆ. ಆಯ್ಕೆಯಾದ ಈ ಸದಸ್ಯರು ಮೂರು ವರ್ಷಗಳ ಕಾಲ ಅಭಿವೃದ್ಧಿ ಸಮಿತಿಯ ಸದಸ್ಯರಾಗಿರಲಿದ್ದಾರೆ.

ದಲಿತ ಶಾಸಕ ಕುಕ್ಕೆ ಸುಬ್ರಹ್ಮಣ್ಯ ದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಬಳಿಕ ಕ್ಷೇತ್ರದ ಸಮಿತಿಯಲ್ಲಿ ಸದಸ್ಯತ್ವ ನೀಡಲಿಲ್ಲ ಎನ್ನುವ ಆಕ್ರೋಶ ಇದೀಗ ತಣ್ಣಗಾಗಿದೆ. ಕ್ಷೇತ್ರದ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗಕ್ಕೆ ಕ್ಷೇತ್ರದ ಆಡಳಿತ ವ್ಯವಸ್ಥೆಯಲ್ಲಿ ಅವಕಾಶವನ್ನು ಈ ಹಿಂದಿನ ಸಮಿತಿಗಳಲ್ಲಿ ನೀಡಲಾಗಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments