Thursday, August 5, 2021
No menu items!
Home Karnataka ಕುಕ್ಕೆ ಸುಬ್ರಮಣ್ಯ ವ್ಯವಸ್ಥಾಪನ ಸಮಿತಿ ವಿಚಾರ ಸರ್ಕಾರದ ಮುಂದೆ

ಕುಕ್ಕೆ ಸುಬ್ರಮಣ್ಯ ವ್ಯವಸ್ಥಾಪನ ಸಮಿತಿ ವಿಚಾರ ಸರ್ಕಾರದ ಮುಂದೆ

ಮಂಗಳೂರು : ರಾಜ್ಯದ ಶ್ರೀಮಂತ ಕ್ಷೇತ್ರ ಎಂದು ಗುರುತಿಸಿಕೊಂಡಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅವಧಿ ಮುಗಿದು ಒಂದು ವರ್ಷ ಪೂರ್ಣಗೊಂಡಿದೆ. ಹೀಗಾಗಿ ದೇಗುಲದಲ್ಲಿ ನೂತನ ಆಡಳಿತ ಸಮಿತಿ ನೇಮಕಾತಿ ವಿಚಾರ ಪ್ರಸ್ತಾಪವಾಗುತ್ತಲೇ ಇರುತ್ತದೆ. ಆದ್ರೆ ಸರ್ಕಾರ ಮಾತ್ರ ಈ ಬಗ್ಗೆ ಸಮರ್ಪಕವಾದ ತೀರ್ಮಾನವನ್ನು ಇಲ್ಲಿವರೆಗೂ ತೆಗೆದುಕೊಂಡಿಲ್ಲ. ಈ ವಿಳಂಬಕ್ಕೆ ಕಾರಣ ಕ್ಷೇತ್ರದಲ್ಲಿ ವ್ಯವಸ್ಥಾಪನಾ ಸಮಿತಿ ಬದಲಿಗೆ ಅಭಿವೃದ್ಧಿ ಸಮಿತಿ ಅಥವಾ ಪ್ರಾಧಿಕಾರ ರಚಿಸಲು ಸರಕಾರ ನಿರ್ಧರಿಸಿದೆ ಎನ್ನಲಾಗಿದೆ.

ಪ್ರಸ್ತುತ ವ್ಯವಸ್ಥಾಪನ ಸಮಿತಿಯ ಆಯ್ಕೆಯ ಪ್ರಕ್ರಿಯೆಗಳು ಸ್ಥಗಿತಗೊಂಡಿದೆ. ಆದ್ದರಿಂದ ಕುಕ್ಕೆಗೆ ಮುಂದೆ ಅಭಿವೃದ್ಧಿ ಸಮಿತಿಯೋ ಅಥವಾ ಪ್ರಾಧಿಕಾರವೋ ಎನ್ನುವ ನಿರೀಕ್ಷೆಯಲ್ಲಿ ಇದೀಗ ಕ್ಷೇತ್ರದ ಭಕ್ತ ಸಮುದಾಯವಿದೆ. ಈ ಕುರಿತಂತೆ ಸರ್ಕಾರದ ಅಂತಿಮ ತೀರ್ಮಾನವು ಕೆಲವೇ ದಿನಗಳಲ್ಲಿ ಹೊರಬೀಳುವ ಸಾಧ್ಯತೆಗಳಿವೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿದ್ದು, ಕುಕ್ಕೆ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಬಗ್ಗೆ ಪ್ರಸ್ತಾಪನೆ ಇದೆ. ಆದರೆ, ಅಂತಿಮ ತೀರ್ಮಾನ ಆಗಿಲ್ಲ. ಕ್ಷೇತ್ರಕ್ಕೆ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಅಥವಾ ಪ್ರಾಧಿಕಾರ ರಚನೆಯ ಪ್ರಸ್ತಾಪ ಇಲಾಖೆಯ ಮುಂದಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಠಿಯಲ್ಲಿ ವಿಮರ್ಶೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದು. ಮುಂದಿನ ಒಂದು ವಾರದ ಒಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಸುಬ್ರಹ್ಮಣ್ಯ ಕ್ಷೇತ್ರವನ್ನು ಪ್ರಾಧಿಕಾರ ಮಾಡಬೇಕೆಂಬ ಚಿಂತನೆಯ ಬಗ್ಗೆ ಇಲಾಖೆ, ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಇದರ ಮುಂದುವರೆದ ಭಾಗವಾಗಿ ಸದ್ಯ ಪ್ರಾಧಿಕಾರ ರಚಿಸದೆ ಅಭಿವೃದ್ಧಿ ಸಮಿತಿ ರಚಿಸಲು ಸರಕಾರ ನಿರ್ಧರಿಸಿದೆ ಎನ್ನಲಾಗಿದೆ. ದೇವಳದ ಆಡಳಿತ ನೋಡಿಕೊಳ್ಳುವ ದೃಷ್ಠಿಯಿಂದ ಇಲಾಖೆ ವತಿಯಿಂದ ಸಾರ್ವಜನಿಕವಾಗಿ ಅರ್ಜಿ ಕರೆದು, ಬಳಿಕ ಅವುಗಳ ಪರಿಶೀಲನೆ ನಡೆಸಿ, 8 ಮಂದಿ ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನ ಸಮಿತಿಯು ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಮುಖಾಂತರ ರಚನೆಯಾಗುತ್ತಿತ್ತು. ಆ ಬಳಿಕದಲ್ಲಿ ಕ್ಷೇತ್ರದ ಅಭಿವೃದ್ಧಿ, ಚಟುವಟಿಕೆಗಳು ವ್ಯವಸ್ಥಾಪನ ಸಮಿತಿ ಸದಸ್ಯರ, ಸಮಿತಿಯ ನಿರ್ಣಯದಂತೆ ನಡೆಯುತ್ತದೆ. ಆದರೆ, ಸರಕಾರ ಈವರೆಗೆ ವ್ಯವಸ್ಥಾಪನಾ ಸಮಿತಿ ರಚನೆಯ ಬಗ್ಗೆ ಯಾವುದೇ ಸೂಚನೆ ನೀಡದಿರುವ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಸಮಿತಿ ಅಥವಾ ಅಭಿವೃದ್ಧಿ ಪ್ರಾಧಿಕಾರದ ರಚನೆಯಾಗುವುದು ಬಹುತೇಕ ಸ್ಪಷ್ಟವಾಗಿದೆ ಎನ್ನುವ ನಿರೀಕ್ಷೆಗಳು ಹೆಚ್ಚಾಗಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments