Thursday, August 5, 2021
No menu items!
Home Latest ಪ್ರೀತಿಸಿದ ಹುಡುಗಿ ಸಿಗಲಿಲ್ಲ ಅಂತ ಪ್ರಾಣವನ್ನೇ ಬಿಟ್ಟ ಯುವಕ..!

ಪ್ರೀತಿಸಿದ ಹುಡುಗಿ ಸಿಗಲಿಲ್ಲ ಅಂತ ಪ್ರಾಣವನ್ನೇ ಬಿಟ್ಟ ಯುವಕ..!

ಮೈಸೂರು:ಈ ಪ್ರೀತಿ ಅನ್ನೋದೆ ಹಾಗೆ. ಮನುಷ್ಯ ಯಾವ ಕಷ್ಟ ಬೇಕಾದರೂ ಸಹಿಸುತ್ತಾನೆ ಆದ್ರೆ ಈ ಪ್ರೀತಿ ತನ್ನಿಂದ ದೂರ ಆಗುವುದನ್ನು ಮಾತ್ರ ಸಹಿಸಲಾರ. ಪ್ರೀತಿಗಾಗಿ ಪ್ರಾಣವನ್ನೇ ಕಳೆದುಕೊಂಡಿರುವ ಅದೆಷ್ಟೋ ಜನರಿದ್ದಾರೆ. ಅಂಥದ್ದೇ ಘಟನೆ ಮೈಸೂರಿನಲ್ಲೂ ನಡೆದಿದೆ.

ತನ್ನ ಪ್ರೀತಿಯ ವೈಫಲ್ಯ, ತಂಗಿಯ ಮದುವೆ ರದ್ದಾದ ಘಟನೆಯಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ವಿಜಯಶ್ರೀಪುರದಲ್ಲಿ ನಡೆದಿದೆ.

ಚೇತನ್ ಶರ್ಮಾ(29) ಮೃತ ದುರ್ದೈವಿ. ಬೆಂಗಳೂರಿನ ಚೇತನ್ ಶರ್ಮ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದರು. ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ಮಾಡಿದ್ದ ಚೇತನ್ ಶರ್ಮ ಹತ್ತು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು. ಆದರೆ, ಇವರಿಬ್ಬರ ಪ್ರೇಮ ಕಾರಣಾಂತರಗಳಿಂದ ಮುರಿದುಬಿದ್ದಿತ್ತು. ಹೀಗಾಗಿ, ಚೇತನ್ ಶರ್ಮ ಮಾನಸಿಕ ಖಿನ್ನತೆಗೆ ಒಳಗಾಗಿದ್ದ.

ಇತ್ತೀಚೆಗಷ್ಟೆ ಫಿಕ್ಸ್ ಆಗಿದ್ದ ತಂಗಿಯ ಮದುವೆ ಕ್ಯಾನ್ಸಲ್ ಆಗಿತ್ತು. ಈ ಎಲ್ಲಾ ಬೆಳಣಿಗೆಗಳಿಂದ ಮನನೊಂದಿದ್ದ ಚೇತನ್ ಶರ್ಮ ಮಾನಸಿಕ ಖಿನ್ನತೆಗೆ ಒಳಗಾಗಿ ಮೈಸೂರಿನ ವಿಜಯಶ್ರೀಪುರದಲ್ಲಿರುವ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments