Thursday, May 13, 2021
No menu items!
Home Bharata ಪುಣೆಯಲ್ಲಿ ಓಪನ್ ಆಯ್ತು ಮಕ್ಕಳ ಸ್ನೇಹಿ ಪೊಲೀಸ್ ಠಾಣೆ

ಪುಣೆಯಲ್ಲಿ ಓಪನ್ ಆಯ್ತು ಮಕ್ಕಳ ಸ್ನೇಹಿ ಪೊಲೀಸ್ ಠಾಣೆ

ಮಹಾರಾಷ್ಟ್ರ: ಪುಟ್ಟ ಮಕ್ಕಳ ಅಪರಾಧ, ಸಂಘರ್ಷ ಮತ್ತು ಜಗಳದಲ್ಲಿ ಶಿಕ್ಷೆಗೆ ಗುರಿಯಾದ ಮಕ್ಕಳಿಗೆ ಸ್ನೇಹಪರ ವಾತಾವರಣವನ್ನು ಸೃಷ್ಟಿಸುವ ಉದ್ದೇಶದಿಂದ ಪುಣೆಯಲ್ಲಿ ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ತೆರೆಯಲಾಗಿದೆ. ಇದೇ ಮೊದಲ ಬಾರಿಗೆ ಇಂದ್ದೊಂದು ಠಾಣೆ ಆರಂಭ ಮಾಡಲಾಗಿದೆ. ಪುಣೆಯ ಲಷ್ಕರ್ ಪೊಲೀಸ್ ಠಾಣೆ ಆವರದಲ್ಲಿ ಈ ಠಾಣೆ ಆರಂಭಿಸಲಾಗಿದೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾರ್ಗಸೂಚಿಗಳ ಅಡಿಯಲ್ಲಿಈ ನೂತನ ಪೊಲೀಸ್ ಠಾಣೆ ತೆರೆಯಲಾಗಿದ್ದು, ಕಾನ್ಫುರ್ ಐಐಟಿ ನಿರ್ದೇಶಕ ಡಾ. ಅಭಯ್ ಕರಂದಿಕರ್ ಅವರು ಉದ್ಘಾಟಿಸಿದ್ದಾರೆ. ಈ ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ಕಾರ್ಯ ನಿರ್ವಹಿಸಲಿದೆ.

ಮಹಾರಾಷ್ಟ್ರದಲ್ಲಿ ಮೊದಲು ಆರಂಭವಾಗಿರುವ ಈ ವಿನೂತನ ಪರಿಕಲ್ಪನೆಯ ಮಕ್ಕಳ ಸ್ನೇಹಿ ಪೊಲೀಸ್ ಠಾಣೆಯು ಮಾದರಿ ಎನಿಸಿದೆ. ಪುಣೆಯಲ್ಲಿ ಆರಂಭವಾಗಿರುವ ಮಕ್ಕಳ ಸ್ನೇಹಿ ಪೊಲೀಸ್ ಠಾಣೆಯು ಯಶಸ್ವಿ ಎಂದು ಎನಿಸಿದ್ದಲ್ಲಿ ರಾಜ್ಯದ ಇತರೆ ಕಡೆಗಳಲ್ಲಿ ಇದೇ ರೀತಿಯ ಠಾಣೆಗಳನ್ನು ಆರಂಭಿಸುವುದಕ್ಕೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪುಣೆ ಪೊಲೀಸ್ ಆಯುಕ್ತ ಅಮಿತಾಬ್ ಗುಪ್ತಾ ಹೇಳಿದ್ದಾರೆ.

ಚಿಲ್ಡ್ರನ್ಸ್ ಫೌಂಡೇಶನ್ ಕಾರ್ಯದಲ್ಲಿ ಹೊಸ ಭರವಸೆಯೊಂದಿಗೆ ಕೈಜೋಡಿಸಿದ ಪುಣೆ ಪೊಲೀಸರಿಗೂ ಕೂಡಾ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಬಾಲಾಪರಾಧ ಮತ್ತು ಮಕ್ಕಳ ಮನಃಪರಿವರ್ತನೆಗೆ ಇದೊಂದು ವಿನೂತನ ಪರಿಕಲ್ಪನೆಯಾಗಿದೆ ಎಂದು ಹೇಳಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments