Thursday, August 5, 2021
No menu items!
Home Bharata ಬೈಡನ್ ಕೋವಿಡ್ ಕಾರ್ಯಪಡೆಯಲ್ಲಿ ಮಂಡ್ಯದ ವಿವೇಕ್ ಗೆ ಪ್ರಮುಖ ಹುದ್ದೆ..?

ಬೈಡನ್ ಕೋವಿಡ್ ಕಾರ್ಯಪಡೆಯಲ್ಲಿ ಮಂಡ್ಯದ ವಿವೇಕ್ ಗೆ ಪ್ರಮುಖ ಹುದ್ದೆ..?

ವಾಷಿಂಗ್ಟನ್: ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಪ್ರಚಂಡ ಬಹುಮತ ಗಳಿಸಿ ಮುಂದಿನ ಅಧ್ಯಕ್ಷರಾಗಿ ಜೋ ಬೈಡನ್ ನಿಯೋಜನೆಗೊಂಡಿದ್ದಾರೆ. ಇದೀಗ ಜೋ ಬೈಡನ್ ತಮ್ಮ ಚೊಚ್ಚಲ ಭಾಷಣದಲ್ಲಿ ಕೋವಿಡ್ ತಡೆಯ ಬಗ್ಗೆ ಮಾತನಾಡಿದ್ದು ,ಪ್ರಮುಖ ವಿಜ್ಞಾನಿ ಮತ್ತು ತಜ್ಞರೊಳಗೊಂಡ ತಂಡವೊಂದನ್ನ ಸಿದ್ದಪಡಿಸುವುದಾಗಿ ಹೇಳಿದ್ದರು. ಅದರಂತೆ ತಂಡ ಸಿದ್ದವಾಗಿದ್ದು ಆ ತಂಡದ ಸಾರಥ್ಯ ಭಾರತೀಯ ಮೂಲದ ವಿವೇಕ್ ಮೂರ್ತಿ ಅವರಿಗೆ ಸಿಗುವ ಸಾಧ್ಯತೆ ನಿಚ್ಚಳವಾಗಿದೆ.

ಮಂಡ್ಯದ ಜಿಲ್ಲೆ ಮದ್ದೂರು ತಾಲೂಕಿನ ಹಲ್ಲೆಗೆರೆ ಗ್ರಾಮದವರಾಗಿರುವ ವಿವೇಕ್ ಮೂರ್ತಿ ಈ ಹಿಂದೆ ಒಬಾಮಾ ಅವರ ಸರ್ಜನ್ ಜನರಲ್ ಆಗಿದ್ದರು. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಜೋ ಬೈಡನ್ ಅವರ ಚುನಾವಣಾ ಕಾರ್ಯತಂತ್ರಕ್ಕೆ ಕನ್ನಡಿಗ ಡಾ.ವಿವೇಕ್ ಮೂರ್ತಿ ಬೆನ್ನೆಲುಬಾಗಿ ನಿಂತಿದ್ದರು.

ಬ್ರಿಟನ್‌ನಲ್ಲಿ ಹುಟ್ಟಿ ಅಮೆರಿಕದಲ್ಲಿ ಬೆಳೆದಿರುವ ವಿವೇಕ್ ಮೂರ್ತಿ, ಮಂಡ್ಯದ ಮದ್ದೂರಿನವರು, ಇವರ ಅಜ್ಜ ಎಚ್ ನಾರಾಯಣಶೆಟ್ಟಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಆಪ್ತರಾಗಿದ್ದರು. ಇವರ ತಂದೆ ಲಕ್ಷ್ಮೀನರಸಿಂಹ ಮೂರ್ತಿ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದರು. ತಾಯಿ ಮೈತ್ರೇಯಿ. ವಿವೇಕ್ ಮೂರ್ತಿ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಹಾಗೂ ಎಂಬಿಎ ಪದವಿ ಪಡೆದು ಬಳಿಕ ಯೇಲ್ಸ್ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಮಂಡ್ಯ ಮೂಲದ ವೈದ್ಯರಾದ, 43 ವರ್ಷದ ಡಾ. ವಿವೇಕ್​ ಮೂರ್ತಿ ಜೋ ಬೈಡನ್​ ಅವರ ಕೋವಿಡ್​ ಟಾಸ್ಕ್​ಫೋರ್ಸ್​​ಗೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಇದು ಕನ್ನಡಿಗರಿಗೂ ಸಂತಸ ತಂದಿದ್ದು ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಹಲವರು ಶುಭ ಹಾರೈಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments