Thursday, September 23, 2021
No menu items!
Home Karnataka ಬೆಂಗಳೂರಿನಲ್ಲಿ ದೊಡ್ಡ ಅಗ್ನಿ ಅವಘಡ..!

ಬೆಂಗಳೂರಿನಲ್ಲಿ ದೊಡ್ಡ ಅಗ್ನಿ ಅವಘಡ..!

ಬೆಂಗಳೂರಿನಲ್ಲಿ ದೊಡ್ಡ ಅಗ್ನಿ ಅವಘಡ..!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿದೆ. ಗುಡ್ಡದಹಳ್ಳಿಯಲ್ಲಿನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬೃಹತ್ ಪ್ರಮಾಣದ ಅಗ್ನಿ ಅವಘಡ ಉಂಟಾಗಿದೆ. ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ.

ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದ ಮನೆಗಳೂ ಆಹುತಿಯಾಗಿದ್ದು ಎಲ್ಲರನ್ನೂ ಮನೆ ಖಾಲಿ ಮಾಡಿಸುವ ಕೆಲಸದಲ್ಲಿ ಪೊಲೀಸರು ನಿರತಾಗಿದ್ದಾರೆ. ಹೀಗಾಗಿ ಕೂಡಲೇ ಸ್ಥಳಕ್ಕೆ ದಾವಿಸಿರುವ 8 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸುವ ಕಾರ್ಯಕ್ಕೆ ಮುಂದಾಗಿದೆ.

ಕಾರ್ಖಾನೆಯಲ್ಲಿ ಅಗ್ನಿ ಅಪಘಡ ಸಂಭವಿಸಿದ ವೇಳೆ ಒಳಗೆ ನಾಲ್ಕು ಜನ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಸಿಲಿಂಡರ್ ಬ್ಲಾಸ್ಟ್ ಆಗುತ್ತಿದ್ದಂತೆ ಅವರು ಕಾರ್ಖಾನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇದರಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ ಎನ್ನಲಾಗುತ್ತಿದೆ. ಈ ನಡುವೆ ಬೆಂಕಿಯ ಕೆನ್ನಾಲಿಗೆಗೆ ಅನೇಕ ವಾಹನಗಳು ಆಹುತಿಯಾಗಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸಪಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು, ಬೃಹತ್ ಪ್ರಮಾಣದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ. ಫ್ಯಾಕ್ಟರಿ ಸಮೀಪದ ರಸ್ತೆಯೆಲ್ಲಾ ಬೆಂಕಿಮಯವಾಗಿದ್ದು, ಫ್ಯಾಕ್ಟರಿ ಸಮೀಪದ ಇಡೀ ಏರಿಯಾವೇ ಹೊಗೆಯಿಂದ ಆವರಿಸಿ ಹೋಗಿದೆ. ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತದಿಂದ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments