Friday, May 14, 2021
No menu items!
Home Special ಅಸ್ತಮಾ, ಕ್ಯಾನ್ಸರ್ ರೋಗಕ್ಕೆ ಮದ್ದು ರಾಗಿ

ಅಸ್ತಮಾ, ಕ್ಯಾನ್ಸರ್ ರೋಗಕ್ಕೆ ಮದ್ದು ರಾಗಿ

ಇತ್ತೀಚಿನ ದಿನಗಳಲ್ಲಿ ರಾಗಿ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಇದಕ್ಕೆ ಅದರ ಆರೋಗ್ಯಕ್ಕೆ ಸಹಾಯಕಾರಿಯಾಗಿರುವ ಅಂಶವೇ ಪ್ರಧಾನ ಕಾರಣ. ಇದನ್ನು ಭಾರತ ಸೇರಿದಂತೆ ಆಫ್ರಿಕಾ, ಈಜಿಪ್ಟ್ ಮತ್ತು ಯುರೋಪ್‌ನ ಕೆಲವು ಭಾಗಗಳಲ್ಲಿ ಕೂಡಾ ಬೆಳೆಯುತ್ತಾರೆ. ಇದು ದೇಹಕ್ಕೆ ತಂಪು ಮತ್ತು ಶಕ್ತಿಯನ್ನು ನೀಡುವುದರ ಜೊತೆಗೆ ಹಲವು ರೋಗಗಳನ್ನು ನಿವಾರಿಸುವ ಶಕ್ತಿ ಈ ರಾಗಿಗೆ ಇದೆ.

* ಅಸ್ತಮಾದಿಂದ ಬಳಲುತ್ತಿರುವವರಿಗೆ ರಾಗಿ ಉತ್ತಮ ಆಹಾರವಾಗಿದ್ದು, ಇದನ್ನು ಬಳಕೆ ಮಾಡುವ ಮೂಲಕ ಆರೋಗ್ಯ ವೃದ್ಧಿಗೊಳಿಸುವುದು ಮಾತ್ರವಲ್ಲದೇ ರೋಗ ಬರದಂತೆ ಕೂಡಾ ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

* ಧಾನ್ಯಗಳ ಎಲ್ಲಾ ಪ್ರಭೇದಗಳು ಪಾಲಿಫೆನೊಲ್ಸ್ ಎಂದು ಕರೆಯಲ್ಪಡುವ ಫೈಟೊಕೆಮಿಕಲ್‌ಗಳಲ್ಲಿ ತುಂಬಿರುತ್ತವೆ. ಅವು ಪ್ರಬಲವಾಗಿ ರೋಗನಿರೋಧಕ ಗುಣಲಕ್ಷಣಗಳನ್ನು ಹೊಂದಿದೆ. ಇದು ಮನುಷ್ಯನ ದೇಹದ ಪ್ರತಿರೋಧಕತೆಯನ್ನು ಹೆಚ್ಚಿಸಬಹುದು ಮತ್ತು ವೈರಸ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

* ರಾಗಿಯಲ್ಲಿ ಕ್ವೆರ್ಸೆಟಿನ್, ಸೆಲೆನಿಯಮ್ ಮತ್ತು ಪ್ಯಾಂಟೋಥೆನಿಕ್ ಆಮ್ಲದ ಅಂಶಗಳಿರುವುದರಿಂದ ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳನ್ನು ಉತ್ಪಾದಿಸುವುದನ್ನು ಕಡಿಮೆಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಜಾಸ್ತಿಯಾಗಿರುವುದರಿಂದ ರಾಗಿಯಲ್ಲಿರುವ ಫೈಬರ್ ಅಂಶವು 30% ರಷ್ಟು ಸ್ತನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಹೇಳಲಾಗುತ್ತದೆ.

* ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ರಕ್ತಹೀನತೆಯು ಬಹಳ ಅಪಾಯಕಾರಿ ಹಾಗೂ ಮಾರಣಾಂತಿಕವೂ ಹೌದು. ರಾಗಿಯಲ್ಲಿ ಕೆಂಪು ರಕ್ತ ಕಣಗಳ ರಚನೆಗೆ ಬೇಕಾದ ಹಿಮೋಗ್ಲೋಬಿನ್ ಅಂಶವು ಜಾಸ್ತಿ ಇರುವುದರಿಂದ ರಾಗಿಯು ರಕ್ತಹೀನತೆಯನ್ನು ತಡೆಯುವಲ್ಲಿ ಸಹಕಾರಿಯಾಗಿದೆ.

* ನಮ್ಮ ದೇಹದಲ್ಲಿರುವ ವಿಷ ಆಮ್ಲವನ್ನು ತೆಗೆದುಹಾಕಲು ರಾಗಿ ಒಂದು ಉತ್ತಮವಾದ ಆಹಾರ ಎಂದೇ ಹೇಳಬಹುದು. ಇದರಲ್ಲಿರುವ ಕ್ವೆರ್ಸೆಟಿನ್ ಎಂಬ ಅಂಶವು ವಿಷ ಆಮ್ಲದ ವಿರುದ್ಧ ಹೋರಾಡಿ ಅದು ನಮ್ಮ ದೇಹದಲ್ಲಿ ಉತ್ಪತ್ತಿ ಆಗದಂತೆ ತಡೆಯುತ್ತದೆ ಇದರಿಂದ ದೇಹ ಆರೋಗ್ಯಯುತವಾಗಿರುತ್ತದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments