ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ತಿಂದು 70 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ನಿನ್ನೆ ರಾತ್ರಿ ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಪುಳಿಯೋಗರೆಯನ್ನ ಭಕ್ತಾಧಿಗಳಿಗೆ ನೀಡಲಾಗಿದೆ. ಪ್ರಸಾದ ತಿಂದ ನಂತರ ಸುಮಾರು 70 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ಎಲ್ಲರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಸಾದ ಸೇವಿಸಿದ ಕೆಲವೇ ಗಂಟೆಗಳಲ್ಲಿ ಭಕ್ತಾಧಿಗಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಎಷ್ಟೋ ಜನ ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣ ಅಸ್ವಸ್ಥಗೊಂಡವರನ್ನ ಆಸ್ಪತ್ರೆಗೆ ಸೇರಿಸಿದ್ದಾರೆ.
ಪುಳಿಯೋಗರೆಯಲ್ಲಿ ಬೆರೆತ ವಿಷ ಅಥವಾ ಫುಡ್ ಪಾಯಿಸನ್ ಏನಾದ್ರೂ ಆಗಿತ್ತ ಎಂಬ ತನಿಖೆ ನಡೆಯುತ್ತಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದೂವರೆ ವರ್ಷದ ಹಿಂದೆ ಚಾಮರಾಜನಗರದ ಕಿಚ್ಚುಗತ್ತಿ ಮಾರಮ್ಮನ ದೇವಾಲಯದಲ್ಲೂ ವಿಷಪ್ರಸಾದ ಸೇವಿಸಿ ಸುಮಾರು ಜನ ಅಸ್ವಸ್ಥರಾಗಿದ್ದರು. ಅದೆಲ್ಲ ಮುಗಿದು ಇತ್ತೀಚೆಗಷ್ಟೇ ದೇವಾಲಯವನ್ನು ಓಪನ್ ಮಾಡಿ ಪೂಜೆ ಮಾಡಲಾಗುತ್ತಿದೆ.