Wednesday, October 27, 2021
No menu items!
Home Entertainment ( Kan ) ಸಿನಿಪ್ರಿಯರಿಗೆ ಸಿಹಿಸುದ್ದಿ; ರಿ-ರಿಲೀಸ್ ಆಗುತ್ತಿವೆ ಸ್ಟಾರ್ ನಟರ ಬ್ಲಾಕ್ ಬ್ಲಸ್ಟರ್ ಸಿನಿಮಾಗಳು…!

ಸಿನಿಪ್ರಿಯರಿಗೆ ಸಿಹಿಸುದ್ದಿ; ರಿ-ರಿಲೀಸ್ ಆಗುತ್ತಿವೆ ಸ್ಟಾರ್ ನಟರ ಬ್ಲಾಕ್ ಬ್ಲಸ್ಟರ್ ಸಿನಿಮಾಗಳು…!

ಬೆಂಗಳೂರು ; ಕೋವಿಡ್ 19 ಹಿನ್ನೆಲೆಯಲ್ಲಿ ಇದುವರೆಗೂ ಮುಚ್ಚಿದ್ದ ಚಿತ್ರಮಂದಿರಗಳು ಇದೀಗ ತೆರೆದಿವೆ. ಆದರೆ ಪ್ರೇಕ್ಷಕ ಮಹಾಪ್ರಭುಗಳು ಥಿಯೇಟರ್ ನತ್ತ ಕಾಲಿಕ್ಕಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ಚಿತ್ರಗಳನ್ನ ಚಿತ್ರಮಂದಿರಕ್ಕೆ ತರಲು ನಿರ್ದೇಶಕ /ನಿರ್ಮಾಪಕರು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಪ್ರೇಕ್ಷಕ ವರ್ಗ ವನ್ನ ಮತ್ತೆ ಚಂದನವನದತ್ತ ಸೆಳೆಯುವ ನಿಟ್ಟಿನಲ್ಲಿ ಸ್ಟಾರ್ ನಟರ ಸೂಪರ್ ಹಿಟ್ ಚಿತ್ರಗಳನ್ನು ಮತ್ತೆ ರಿಲೀಸ್ ಮಾಡಲಾಗುತ್ತಿದೆ.

ದಕ್ಷಿಣ ಚಿತ್ರರಂಗದಲ್ಲಿ ಧೂಳೆಬ್ಬಿಸಿ, ಸ್ಯಾಂಡಲ್ವುಡ್ ನತ್ತ ಎಲ್ಲಾ ಸಿನಿರಸಿಕರು ತಿರುಗಿ ನೋಡುವಂತೆ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆ.ಜಿ.ಎಫ್ ಛಾಪ್ಟರ್ 1 ಮತ್ತೆ ಚಿತ್ರಮಂದಿರಕ್ಕೆ ರೀ ಎಂಟ್ರಿ ನೀಡಿದೆ. ಇನ್ನು ಸೆಂಚುರಿ ಸ್ಟಾರ್ ಶಿವಣ್ಣ ಅಭಿನಯದ ಸೂಪರ್‌ ಹಿಟ್ ಚಿತ್ರ ‘ಟಗರು’ ಕೂಡಾ ದೇಶಾದ್ಯಂತ ಪಿವಿಆರ್ ಐನೋಕ್ಸ್ ಚಿತ್ರಮಂದಿರಗಳಲ್ಲಿ ರಿ-ರಿಲೀಸ್ ಕಾಣುತ್ತಿದೆ.

ಇದರ ಜೊತೆಗೆ ಸಿನಿವರ್ಗ ಮೆಚ್ಚಿ ಒಂದು ಬಾರಿ ಸಕ್ಸಸ್ ಕಂಡಿರುವ ಸಿನಿಮಾಗಳಾದ ಲವ್ ಮಾಕ್ಟೇಲ್ , ದಿಯಾ, ಶಿವಾರ್ಜುನ ಸೇರಿದಂತೆ ಹಲವು ಚಂದನವನದ ಚಿತ್ರಗಳು ಇದೀಗಾಗಲೇ ಬೆಳ್ಳಿಪರದೆಯ ಮೇಲೆ ರಾರಾಜಿಸುತ್ತಿವೆ.

ಪ್ರೇಕ್ಷಕರ ಕೊರತೆ ಎದುರಿಸುತ್ತಿರುವ ಚಿತ್ರಮಂದಿರಗಳು ಮತ್ತು ಅದನ್ನೇ ಜೀವನವಾಗಿಸಿಕೊಂಡ ಕೂಲಿ ವರ್ಗ ಕ್ಕೆ ಸ್ಟಾರ್ ನಟರ ಚಿತ್ರದಿಂದಾರೂ ಪ್ರೇಕ್ಷಕರು ಬಂದಾರು ಎಂಬ ನಿರೀಕ್ಷೆಯಲ್ಲಿದ್ದಾರೆ. ಇದು ಎಷ್ಟರ ಮಟ್ಟಿಗೆ ಸಕ್ಸಸ್ ಕಾಣುತ್ತದೆ ಎನ್ನವುದನ್ನ ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments