Saturday, December 4, 2021
No menu items!
Home Karnataka ಸಿಎಂ ವಿರುದ್ಧ ಅಸಮಾಧಾನ ಹೊರ ಹಾಕಿದ ಸಂಸದ ಶ್ರೀನಿವಾಸ್ ಪ್ರಸಾದ್

ಸಿಎಂ ವಿರುದ್ಧ ಅಸಮಾಧಾನ ಹೊರ ಹಾಕಿದ ಸಂಸದ ಶ್ರೀನಿವಾಸ್ ಪ್ರಸಾದ್

ಮೈಸೂರು: ಸಿಎಂ ಯಡಿಯೂರಪ್ಪ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೋರ್ಡ್ ಚೇರ್ಮನ್ ಗಳನ್ನು ನೇಮಕ ಮಾಡುವುದರಲ್ಲಿ ಅಷ್ಟೊಂದು ಸಮರ್ಪಕವಾಗಿ ಮಾಡಿಲ್ಲ , ಈ ವಿಚಾರದಲ್ಲಿ ಯಡಿಯೂರಪ್ಪ ನವರ ವಿರುದ್ಧ ನನಗೆ ಅತೃಪ್ತಿ ಇದೆ ಎಂದಿದ್ದಾರೆ.

ಸಂವಿಧಾನ ದಿನಾಚರಣೆ ಹಿನ್ನೆಲೆ ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿರುವ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಸಿಎಂ ವಿರುದ್ಧ ನನಗೆ ಅಸಮಾಧಾನ ಎನ್ನುವುದಕ್ಕಿಂತ ಇರುವುದನ್ನು ಹೇಳಿದೆ. ಶಾಸಕರಿಗೆ ಮಂತ್ರಿಯಾಗದವರು ಬೋರ್ಡ್ ಚೇರ್ಮನ್ ಗಳು ಆಗಿದ್ದಾರೆ. ಅದು ಸರಿ, ಆದರೆ ಕೆಲವು ನಿಗಮ‌ ಮಂಡಳಿಯ ನೇಮಕಾತಿ ಮಾಡುವುದರಲ್ಲಿ ಯಡಿಯೂರಪ್ಪನವರು ಸರಿಯಾಗಿ ಮಾಡಲಿಲ್ಲ. ಸ್ವಲ್ಪ ಗೊಂದಲ ಮಾಡಿಕೊಂಡರು, ಯೋಚನೆ ಮಾಡಿ, ಚರ್ಚೆ ಮಾಡಲಿಲ್ಲ , ಇದರ ಬಗ್ಗೆ ಸಿರಂ ವಿರುದ್ಧ ಅತೃಪ್ತಿ ನನಗೆ ಇದೆ ಎಂದರು.

ಇನ್ನು ಸಿಎಂ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ , ರಾಷ್ಟ್ರೀಯ ಪಕ್ಷ ಬಿಜೆಪಿ ಕೇಂದ್ರ ನಾಯಕರು ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ. ಯಡಿಯೂರಪ್ಪ ನವರು ಮಂತ್ರಿ ಮಂಡಲ ವಿಸ್ತರಣೆ ಮಾಡುವ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ. ಮುಖ್ಯಮಂತ್ರಿ ಅಂದ ಮೇಲೆ ಸ್ವಲ್ಪ ಒತ್ತಡ ಇದ್ದೇ ಇರುತ್ತದೆ, ಸ್ವಲ್ಪ ತಾಳ್ಮೆ ವಹಿಸಬೇಕು.

ಯಡಿಯೂರಪ್ಪ ಇತ್ತೀಚಿಗೆ ಬದಲಾಗಿದ್ದಾರೆ ಎಂಬ ಪ್ರಶ್ನೆಗೆ ಅಧಿಕಾರ ಬಂದಾಗ ಸ್ವಲ್ಪ ಬದಲಾವಣೆ ಆಗುವುದು ಸಹಜ ಎಂದ ಸಂಸದರು, ಸಿದ್ದರಾಮಯ್ಯ ಅವರಿಗೆ ಅಧಿಕಾರ ಇತ್ತು, ಆದರೆ ಬುದ್ದಿವಂತಿಕೆ ಇರಲಿಲ್ಲ , ಅಧಿಕಾರದ ಮದದಲ್ಲಿ ಮೈ ಮರೆತು ಚುನಾವಣೆ ಸೋತರು, ಆನಂತರ ಸಿದ್ದರಾಮಯ್ಯ ನವರ ಗತಿ ಏನಾಯಿತು ಎಂಬುದನ್ನು ನೆನಪಿಸಿಕೊಳ್ಳಬೇಕು, ಯಡಿಯೂರಪ್ಪ ನವರು ಮುಳ್ಳಿನ ಮೇಲೆ ಪಂಚೆ ಹಾಕಿದ್ದಾರೆ, ಅದನ್ನು ಮೆಲ್ಲನೆ ತೆಗೆದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments