Saturday, May 15, 2021
No menu items!
Home Karnataka ವಿಜಯನಗರ ಜಿಲ್ಲೆಗೆ ಸೇರ್ಪಡೆಯಾಗಿವೆ ಆರು ತಾಲೂಕುಗಳು

ವಿಜಯನಗರ ಜಿಲ್ಲೆಗೆ ಸೇರ್ಪಡೆಯಾಗಿವೆ ಆರು ತಾಲೂಕುಗಳು

ಬೆಂಗಳೂರು: ನೂತನವಾಗಿ ಘೊಷಣೆಯಾಗಿರುವ ವಿಜಯನಗರ ಜಿಲ್ಲೆಗೆ ಇಂದು 6 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದೆ. ಹೊಸಪೇಟೆ, ಕೊಟ್ಟರೂ, ಕೂಡ್ಲಗಿ , ಹೂವಿನಹಡಗಲಿ, ಹರಪ್ಪನಳ್ಳಿ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದರು.

ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಬಳಿಕ ಮಾಹಿತಿ ನೀಡಿದ ಕಾನೂನು ಸಚಿವ ಮಾಧುಸ್ವಾಮಿ, ಬಳ್ಳಾರಿ ಜಿಲ್ಲೆಯನ್ನು ವಿಭಾಗ ಮಾಡಿ ನೂತನ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ನೂತನ ಜಿಲ್ಲೆ ವಿಜಯನಗರಗೆ ಆರು ತಾಲ್ಲೂಕುಗಳನ್ನು ಸೇರಿಸಲಾಗಿದೆ. ಕಳೆದ ಒಂದು ತಿಂಗಳ ಹಿಂದೆಯೆ ನೂತನ ಜಿಲ್ಲೆ ಅಸ್ತಿತ್ವಕ್ಕೆ ಸಚಿವ ಸಂಪುಟ ಅಸ್ತು ಎಂದಿತ್ತು. ಆದರೆ ವಿಜಯನಗರ ಜಿಲ್ಲೆಗೆ ಯಾವ ತಾಲ್ಲೂಕಗಳು ಸೇರಬೇಕು ಎಂದು ಚರ್ಚೆ ನಡೆಯುತ್ತಿತ್ತು. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಹೊರ ಬಿದ್ದಿದೆ. ತೀರ್ಮಾನದ ಪ್ರಕಾರ ವಿಜಯನಗರಕ್ಕೆ ಆರು ತಾಲ್ಲೂಕಗಳು ಸೇರ್ಪಡೆಯಾಗಿವೆ.

ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಸದ್ಯ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚಿಸಿರುವ ಕಾರಣ ಆರು ತಾಲೂಕುಗಳು ಹೊಸ ಜಿಲ್ಲೆಗೆ ಸೇರ್ಪಡೆಯಾಗಿದೆ. ಹೀಗಾಗಿ ಬಳ್ಳಾರಿ ಜಿಲ್ಲೆಗೆ ಸದ್ಯ ಐದು ತಾಲೂಕುಗಳು ಉಳಿದಿವೆ. ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿ ಮುಂದುವರಿಯಲಿದೆ.

ಈ ಹಿಂದೆ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಆನಂದ್ ಸಿಂಗ್ ಒತ್ತಾಯ ಮಾಡಿದ್ದರು. ಆನಂದ್ ಸಿಂಗ್ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರವಾದ ಬಳಿಕ 2019ರ ಸಪ್ಟೆಂಬರ್ ನಲ್ಲೇ ವಿಜಯನಗರ ನೂತನ ಜಿಲ್ಲೆಯ ಬಗ್ಗೆ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದರು. ಆದರೆ ಅದು ಅನುಷ್ಠಾನಕ್ಕೆ ಬಂದಿರಲಿಲ್ಲ. ಸದ್ಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾಗಿ ರಚನೆಯಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments