Tuesday, August 3, 2021
No menu items!
Home Latest ಬಿಎಂಟಿಸಿ ಮಹಿಳಾ ಸಿಬ್ಬಂದಿ ಸುರಕ್ಷತೆಗೆ ಹೊಸ ಮಾರ್ಗ: ಲೇಡಿ ಸಿಬ್ಬಂದಿ ವರ್ಗಕ್ಕೆ ಸ್ಪೆಷಲ್ ...

ಬಿಎಂಟಿಸಿ ಮಹಿಳಾ ಸಿಬ್ಬಂದಿ ಸುರಕ್ಷತೆಗೆ ಹೊಸ ಮಾರ್ಗ: ಲೇಡಿ ಸಿಬ್ಬಂದಿ ವರ್ಗಕ್ಕೆ ಸ್ಪೆಷಲ್ ಕರಾಟೆ ಕ್ಲಾಸ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸಂಚರಿಸುವ ಬಿಎಂಟಿಸಿ ಮಹಿಳಾ ಸಿಬ್ಬಂದಿ ವರ್ಗದ ಹಿತದೃಷ್ಟಿಯಿಂದ ಇದಾಗಲೇ ಹಲವು ಯೋಜನೆಗಳನ್ನು ಕೈಗೆತ್ತಿಕೊಂಡಿದೆ.ಇದೀಗ ಬಿಎಂಟಿಸಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದು ಮಹಿಳಾ ಸಿಬ್ಬಂದಿಗಳ ಸ್ವರಕ್ಷಣೆಗಾಗಿ ಕರಾಟೆ ತರಬೇತಿ ನೀಡಲು ಮುಂದಾಗಿದೆ.

ಬಿಎಂಟಿಸಿಯಲ್ಲಿ ಸಹ ನಿರ್ವಾಹಕ ಹಾಗೂ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ, ಕರ್ತವ್ಯ ನಿರ್ವಹಣೆ ವೇಳೆ ಪುರುಷ ಪ್ರಯಾಣಿಕರು ಹಾಗೂ ಪುರುಷ ಸಹೋದ್ಯೋಗಿಗಳಿಂದ ಕಿರುಕುಳ ಅನುಭವಿಸಿರುವ ಸಾಕಷ್ಟು ನಿದರ್ಶನಗಳಿವೆ. ಇದನ್ನೆಲ್ಲಾ ತಡೆಯುವ ನಿಟ್ಟಿನಲ್ಲಿ ಬಿಎಂಟಿಸಿ ಹೊಸ ಪ್ರಯೋಗಕ್ಕೆ ಕೈ ಹಾಕಿದ್ದು ಮಹಿಳಾ ಸಿಬ್ಬಂದಿಗೆ ಸರಳ ರಕ್ಷಣಾತ್ಮಕ ಮತ್ತು ಆಕ್ರಮಣಕಾರಿ ಚಲನೆಗಳ ಮೂಲಕ ತಮ್ಮನ್ನು ಹೇಗೆ ಕಾಪಾಡಿಕೊಳ್ಳಬಹುದು ಎಂದು ಕಲಿಸಿಕೊಡಲಾಗುತ್ತದೆ.

ಕೇಂದ್ರ ಸರ್ಕಾರದ’ನಿರ್ಭಯಾ ನಿಧಿ’ ಅನುದಾನದ ಅಡಿಯಲ್ಲಿ ಈ ಯೋಜನೆ ರೂಪಿಸಲಾಗಿದೆ. ಬಿಎಂಟಿಸಿ ನಿಗಮದಲ್ಲಿ ಒಟ್ಟು 2,952 ಮಂದಿ ಮಹಿಳಾ ಸಿಬ್ಬಂದಿ ಇದ್ದಾರೆ. ನಿಗಮದ ತರಬೇತಿ ಕೇಂದ್ರದಲ್ಲಿ ಒಟ್ಟು 21 ದಿನಗಳ ಕಾಲ ದಿನಕ್ಕೆ 2 ತಾಸಿನಂತೆ 42 ಗಂಟೆಗಳ ಕಾಲ ಈ ಎಲ್ಲ ತರಬೇತಿ ನೀಡಲು ಯೋಜನೆ ರೂಪಿಸಲಾಗಿದೆ.

ಮಹಿಳಾ ಕಂಡಕ್ಟರ್ ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಡಿಫೆನ್ಸ್ ಟ್ರೈನಿಂಗ್ ಕರಾಟೆ, ಜೂಡೋ, ಸಮರ ಕಲೆ, ಸ್ವಯಂ ದೃಢೀಕರಣ, ಕಾನೂನು ಜ್ಞಾನ, ಸಾರ್ವಜನಿಕ ಭಾಷಣದ ಬಗ್ಗೆ ತರಬೇತಿಯನ್ನು ನೀಡಲು ಬಿಎಂಟಿಸಿ ಮುಂದಾಗಿದೆ ಎಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments