Tuesday, October 26, 2021
No menu items!
Home Latest ಡಿಸೆಂಬರ್ 1ರಿಂದ ಪಂಜಾಬ್ ನಲ್ಲಿ ನೈಟ್ ಕರ್ಫ್ಯೂ ;ನಿಯಮ ಉಲ್ಲಂಘಿಸಿದರೆ ಭಾರೀ ದಂಡ

ಡಿಸೆಂಬರ್ 1ರಿಂದ ಪಂಜಾಬ್ ನಲ್ಲಿ ನೈಟ್ ಕರ್ಫ್ಯೂ ;ನಿಯಮ ಉಲ್ಲಂಘಿಸಿದರೆ ಭಾರೀ ದಂಡ

ಪಂಜಾಬ್: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವ ಸಲುವಾಗಿ ಪಂಜಾಬ್ ಸರ್ಕಾರ ರಾತ್ರಿ ವೇಳೆಯಲ್ಲಿ ಕರ್ಪ್ಯೂ ವಿಧಿಸಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆಯವರೆಗೆ ಕರ್ಫ್ಯೂ ವಿಧಿಸಿ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 1 ರಿಂದ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ಇದಲ್ಲದೆ ಡಿಸೆಂಬರ್ 1 ರಿಂದ ಎಲ್ಲಾ ಹೋಟೆಲ್ ರೆಸ್ಟೋರೆಂಟ್‌ಗಳು ಮತ್ತು ಸಭೆ-ಸಮಾರಂಭಗಳನ್ನು ರಾತ್ರಿ 9.30 ಕ್ಕೆ ಮುಚ್ಚುವಂತೆ ನಿರ್ದೇಶನ ನೀಡಲಾಗಿದೆ. ಇನ್ನು ಕೊರೋನಾ ಸಮಯದಲ್ಲಿ ವಿಧಿಸಲಾಗಿರುವ ನಿಯಮಗಳನ್ನು ಉಲ್ಲಂಘಿಸುವವರ ದಂಡದ ಮೊತ್ತವನ್ನು ದ್ವಿಗುಣಗೊಳಿಸಿ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಪಂಜಾಬ್ ಸಿಎಂ,ಮಾಸ್ಕ್ ಧರಿಸದಿರುವವರಿಗೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು 500 ರೂ.ಗಳಿಂದ 1,000 ರೂ.ಗೆ ಏರಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ಆರಂಭವಾಗಿದ್ದು, ವೈರಸ್ ಹರಡುವಿಕೆಯನ್ನು ತಡೆಯುವುದಕ್ಕಾಗಿ ಡಿಸೆಂಬರ್ 1ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments