Thursday, May 13, 2021
No menu items!
Home Karnataka ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ: ರಾತ್ರಿ ಮದ್ಯದಂಗಡಿ ತೆರೆದರೆ ಶಿಸ್ತು ಕ್ರಮ-ಅಬಕಾರಿ ಸಚಿವ ಎಚ್.ನಾಗೇಶ್

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ: ರಾತ್ರಿ ಮದ್ಯದಂಗಡಿ ತೆರೆದರೆ ಶಿಸ್ತು ಕ್ರಮ-ಅಬಕಾರಿ ಸಚಿವ ಎಚ್.ನಾಗೇಶ್

ಬೆಂಗಳೂರು : ಯುರೋಪ್ ದೇಶಗಳಲ್ಲಿ ಕಂಡುಬಂದಿರುವ ರೂಪಾಂತರಗೊಂಡ ಎರಡನೇ ಹಂತದ ಕೊರೋನಾ ವೈರಸ್‌ ಕಂಡುಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇಂದಿನಿಂದ ಮುಂದಿನ 9 ದಿನಗಳವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಆದೇಶ ನೀಡಿದೆ. ಈ ಸಮಯದಲ್ಲಿ ಮದ್ಯದಂಗಡಿಗಳು ತೆರೆದಿರುವುದು ಕಂಡುಬಂದರೆ ಶಿಸ್ತು ಕ್ರಮ ಜರಗಿಸುವುದಾಗಿ ಅಬಕಾರಿ ಸಚಿವರು ಎಚ್ಚರಿಕೆ ನೀಡಿದ್ದಾರೆ.

ರಾತ್ರಿ ಕರ್ಫ್ಯೂ ಸಂಬಂಧ ಇಲಾಖೆ ಆಯುಕ್ತರು ಮತ್ತು ಜಿಲ್ಲೆಗಳ ಉಪ ಆಯುಕ್ತರಿಗೆ ಮಾಹಿತಿ ನೀಡಲಾಗಿದೆ. ರಾತ್ರಿ 10ರ ನಂತರ ಮದ್ಯದಂಗಡಿ ಬಂದ್‌ ಮಾಡಿಸಲು ಇಲಾಖೆ ಸಿಬ್ಬಂದಿಗೆ ನಿರ್ದೇಶನ ನೀಡುವಂತೆ ಸೂಚಿಸಿದ್ದೇವೆ ಎಂದು ರಾಜ್ಯ ಅಬಕಾರಿ ಸಚಿವರಾದ ಎಚ್. ನಾಗೇಶ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ರೂಪಾಂತರಗೊಂಡ ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವುದರಿಂದ ಅದನ್ನು ನಿಯಂತ್ರಿಸಲು ರಾಜ್ಯದಲ್ಲಿ 9 ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿಗೆ ತರಲಾಗಿದ್ದು, ರಾಜ್ಯದಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಫ್ಯೂ ವಿಧಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ.

ರಾತ್ರಿ ಕರ್ಫ್ಯೂ ಹಿನ್ನೆಲೆಯಲ್ಲಿ ಎಲ್ಲ ಮದ್ಯದಂಗಡಿ ಮಾಲೀಕರು ಕಡ್ಡಾಯವಾಗಿ ರಾತ್ರಿ 10 ಗಂಟೆಯೊಳಗೆ ಪಬ್ ಹಾಗೂ ಬಾರ್‌ಗಳನ್ನು ಬಂದ್ ಮಾಡಬೇಕು. ಇಲ್ಲದಿದ್ದರೆ, ಅಬಕಾರಿ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಎಂದು ಅಬಕಾರಿ ಸಚಿವರು ಹೇಳಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments