Tuesday, October 26, 2021
No menu items!
Home Bharata ನಿವಾರ್ ಚಂಡಮಾರುತ ಎಫೆಕ್ಟ್ ತಮಿಳುನಾಡಿನಲ್ಲಿ ಬಸ್ ಸೇವೆ, ವಿಮಾನ ಸೇವೆ ಸ್ಥಗಿತ

ನಿವಾರ್ ಚಂಡಮಾರುತ ಎಫೆಕ್ಟ್ ತಮಿಳುನಾಡಿನಲ್ಲಿ ಬಸ್ ಸೇವೆ, ವಿಮಾನ ಸೇವೆ ಸ್ಥಗಿತ

ಚೆನ್ನೈ: ನಿವಾರ್ ಚಂಡಮಾರುತ ಭಾರಿ ಆತಂಕ ತಂದೊಡ್ಡಿದೆ. ಗಂಟೆಗೆ 100-110 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ಇದು ಎಲ್ಲರಲ್ಲೂ ಆತಂಕ್ಕೆ ಸೃಷ್ಟಿಸಿದೆ. ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ತಮಿಳುನಾಡಿನಲ್ಲಿ ಮಂಗಳವಾರದಿಂದಲೇ ಮಳೆಯಾಗುತ್ತಿದ್ದು, 7 ಜಿಲ್ಲೆಗಳಲ್ಲಿ ಬಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳಿ ತಿಳಿಸಿವೆ. ಜೊತೆಗೆ ಚೆನ್ನೈಯಿಂದ ನಿರ್ಗಮಿಸುವ ಮತ್ತು ಚೆನ್ನೈಗೆ ಹೋಗುವ 12 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.

ಚೆನ್ನೈನಿಂದ ನಿರ್ಗಮಿಸಬೇಕಿದ್ದ ಆರು ವಿಮಾನಗಳು ಮತ್ತು ಚೆನ್ನೈಗೆ ಆಗಮಿಸಬೇಕಿದ್ದ ಆರು ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಕಣ್ಣೂರು, ಕೊಜಿಕೋಡ್, ವಿಜಯವಾಡ, ತಿರುಚಿ, ತೂತ್ತುಕುಡಿ, ಬೆಂಗಳೂರು, ಮಂಗಳೂರು ಮತ್ತು ಹುಬ್ಬಳ್ಳಿ ವಿಮಾನಗಳ ಸಂಚಾರ ಸದ್ಯ ರದ್ದಾಗಿದೆ.

ಈಗಾಗಲೇ ತಮಿಳುನಾಡು ಮತ್ತು ಪುದುಚೆರಿಯ ಅನೇಕ ಕಡೆ ಭಾರಿ ಮಳೆಯಾಗುತ್ತಿದೆ. ಇದು ಇನ್ನೆರಡು ದಿನಗಳ ಕಾಲ ಮತ್ತಷ್ಟು ಆರ್ಭಟಿಸಲಿದೆ. ಮಳೆಯಿಂದ ನಗರ ಮತ್ತು ಹಳ್ಳಿ ಪ್ರದೇಶಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅನೇಕ ಮರಗಳು ಧರೆಗುರುಳುವ, ಭೂಕುಸಿತ ಸಂಭವಿಸುವ ಎಚ್ಚರಿಕೆ ನೀಡಲಾಗಿದೆ. ಮಳೆ ಗಾಳಿಯ ತೀವ್ರತೆಗೆ ಕಟ್ಟಡ ಕುಸಿತ, ವಿದ್ಯುತ್ ಸಂಪರ್ಕ ಕಡಿತ, ದೂರವಾಣಿ ಸಂಪರ್ಕಗಳ ಕಡಿತಗಳು ಉಂಟಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments