Friday, September 24, 2021
No menu items!
Home Bharata ನಿವಾರ್ ಎಫೆಕ್ಟ್; ನಾಳೆ ಸಾರ್ವತ್ರಿಕ ರಜೆ ಘೋಷಿಸಿದ ತಮಿಳುನಾಡು ಸರ್ಕಾರ

ನಿವಾರ್ ಎಫೆಕ್ಟ್; ನಾಳೆ ಸಾರ್ವತ್ರಿಕ ರಜೆ ಘೋಷಿಸಿದ ತಮಿಳುನಾಡು ಸರ್ಕಾರ

ತಮಿಳುನಾಡು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನಿವಾರ್ ಚಂಡಮಾರುತ ತಮಿಳುನಾಡಿನ ಕರಾವಳಿ ಭಾಗಕ್ಕೆ ಅಪ್ಪಳಿಸಲಿದೆ. ನಿವಾರ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ನಿವಾರ್ ಚಂಡಮಾರುತ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗಲಿದೆ .ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಪುದುಚೇರಿಯಲ್ಲಿ ಮುಂದಿನ ಮೂರು ದಿನ ಸೆಕ್ಷನ್​ 144 ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ನಿವಾರ್​ ಚಂಡ ಮಾರುತ ವಾಯುವ್ಯ ದಿಕ್ಕಿಗೆ ತೆರಳಿ ಕಾರೈಕಲ್​ ಮಮಲ್ಲಾಪುರಂ ಕರಾವಳಿ ಹಾದು ಹೋಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡು ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ. ಇನ್ನು ಪರಿಸ್ಥಿತಿ ನಿರ್ವಹಣೆಗೆ ಐದು ಪ್ರವಾಹ ಪರಿಹಾರ ತಂಡ ಮತ್ತು ಡೈವಿಂಗ್​ ತಂಡವನ್ನು ಭಾರತೀಯ ನೌಕಪಡೆ ಚೆನ್ನೈಗೆ ಕಳುಹಿಸಿದೆ. ರಾಮೇಶ್ವರಂ, ನಾಗಪಟ್ಟಣಂ, ಐಎನ್​ಎಸ್​ ಪರಂಡುನಲ್ಲಿ ಒಂದು ಪ್ರವಾಹ ಪರಿಹಾರ ತಂಡವನ್ನು ನಿಯೋಜಿಸಲಾಗಿದೆ.

ನಿವಾರ್ ಚಂಡಮಾರುತ ಪರಿಣಾಮ ಆಂಧ್ರಪ್ರದೇಶದ ಮೇಲೂ ಬೀಳಲಿದ್ದು ರಾಯಲ್ ಸೀಮಾದ ಕೆಲ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕ ರಾಜ್ಯದ ಮೇಲೂ ನಿವಾರ್ ಚಂಡಮಾರುತ ಎಫೆಕ್ಟ್ ಇರಲಿದ್ದು ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಚಾಮರಾಜನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಆಲರ್ಟ್​ ಘೋಷಣೆ ಮಾಡಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments