Thursday, August 5, 2021
No menu items!
Home Karnataka ಮೈತ್ರಿಗೆ ಕಾಂಗ್ರೆಸ್ ಯೋಗ್ಯವಲ್ಲ, ಇನ್ನೆಂದೂ ಮೈತ್ರಿ ಇಲ್ಲ: ಕುಮಾರಸ್ವಾಮಿ..!

ಮೈತ್ರಿಗೆ ಕಾಂಗ್ರೆಸ್ ಯೋಗ್ಯವಲ್ಲ, ಇನ್ನೆಂದೂ ಮೈತ್ರಿ ಇಲ್ಲ: ಕುಮಾರಸ್ವಾಮಿ..!

ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣಾ ಕಣಕ್ಕೆ ದಿನಾಂಕ ಘೋಷಣೆಯಾಗುತ್ತಿರುವಂತೆಯೇ ರಾಜಕೀಯ ಪಕ್ಷಗಳೊಳಗೆ ವಾಕ್ಸಮರ ಆರಂಭವಾಗಿದೆ. ಈ ಬಾರಿ ಚುನಾವಣಾ ಅಖಾಡಕ್ಕೆ ಮೊದಲೇ ಧುಮುಕಿರುವ ಜೆಡಿಎಸ್ ದಳಪತಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ದ ಹರಿಹಾಯ್ಧಿದ್ದಾರೆ. ಹಾಗೆಯೇ ಮೈತ್ರಿ ವಿಚಾರಕ್ಕೂ ಸ್ಪಷ್ಟನೆ ನೀಡಿರುವ ಅವರು ಕಾಂಗ್ರೆಸ್ ಜೊತೆ ಮೈತ್ರಿ ಎನ್ನುವುದು ಈಗ ಮುಗಿದ ಅಧ್ಯಾಯ. ಮುಂದೆದೂ ಅದು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ ಬಿಎಸ್ ಪಿ ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ ಎಂದು ಕಿಡಿಕಾರಿದ್ದಾರೆ.
ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ ಎಂದು ಎಚ್ ಡಿಕೆ ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದ್ದಾರೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments