Friday, May 14, 2021
No menu items!
Home Karnataka ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಬ್ರೇಕ್ : ಸಚಿವ ಆರ್ ಅಶೋಕ್

ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಬ್ರೇಕ್ : ಸಚಿವ ಆರ್ ಅಶೋಕ್

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ 2020 ಮುಗಿದು, 2021 ಬರಲಿದೆ. ಹೊಸ ವರ್ಷಕ್ಕಾಗಿ ಜನ ಕಾಯುತ್ತಿದ್ದಾರೆ. ಈ ವರ್ಷ ಬೇಗ ಮುಗಿದ್ರೆ ಸಾಕು ಅನ್ನೋದು ಎಲ್ಲರ ಮನಸ್ಥಿತಿ. ಅದರಂತೆ ಈ ಬಾರಿಯ ವರ್ಷಾಚರಣೆಯನ್ನು ಸಂತಸದಿಂದ ಮಾಡಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ.

ಬ್ರಿಗೇಡ್, ಎಂಜಿ ರೋಡ್ ನಲ್ಲಿ ಈಗಾಗಲೇ ಆಚರಣೆಗೆ ಬ್ರೇಕ್ ಹಾಕಲಾಗಿದೆ. ಈ ಮಧ್ಯೆ ಇದೀಗ ಸಾರ್ವಜನಿಕವಾಗಿ ಆಚರಸಿವಂತೆಯೂ ಇಲ್ಲ ಎಂಬುದನ್ನು ಸಚಿವರು ಹೇಳಿದ್ದಾರೆ. ವರ್ಷದ ಕೊನೆ ದಿನ ಹಾಗೂ ಹೊಸ ವರ್ಷಾಚರಣೆಯನ್ನ ಸಾರ್ವಜನಿಕವಾಗಿ ಸಂಭ್ರಮಿಸುವಂತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ. ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಕೂಡ ಸಮ್ಮತಿ ಸೂಚಿಸಿದ್ದಾರೆ ಎಂದರು. ಪಬ್, ರೆಸ್ಟೋರೆಂಟ್ ಗಳಲ್ಲಿ ಪಾರ್ಟಿ ಮಾಡಬಹುದು ಆದರೆ 50 ಜನರಿಗಿಂತ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ. ಕೋವಿಡ್ ನಿಯಮ ಪಾಲನೆ ಕಡ್ಡಾಯವಾಗಿದೆ ಎಂದು ಹೇಳಿದರು.

ಕೋವಿಡ್ 2ನೇ ಅಲೆಯ ಕಾರಣದಿಂದಾಗಿ ವಿಜ್ಞಾನಿಗಳ ಸಲಹೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಅವರೊಂದಿಗೆ ನಾನು ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ಚರ್ಚೆ ಮಾಡಿದ್ದೇವೆ. ಅದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ. ಶೀಘ್ರವೇ ಈ ವಿಷಯದಲ್ಲಿ ಆದೇಶ ಹಾಗೂ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಹೇಳಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments