Friday, May 14, 2021
No menu items!
Home Karnataka ಕೇಂದ್ರದ ಮಾರ್ಗಸೂಚಿ ಅನುಸರಿಸಿ, ನೈಟ್ ಕರ್ಫ್ಯೂ ಇರಲ್ಲ : ಸಚಿವ ಸುಧಾಕರ್

ಕೇಂದ್ರದ ಮಾರ್ಗಸೂಚಿ ಅನುಸರಿಸಿ, ನೈಟ್ ಕರ್ಫ್ಯೂ ಇರಲ್ಲ : ಸಚಿವ ಸುಧಾಕರ್

ಬೆಂಗಳೂರು: ಕೊರೊನಾ ರೂಪಾಂತರಿ ವೈರಸ್ ರಾಜ್ಯದಲ್ಲೂ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ದಿನೇ ದಿನೇ ಸೋಂಕು ಹೆಚ್ಚಾಗುತ್ತಿದ್ದು, ಮತ್ತೆ ನೈಟ್ ಕರ್ಫ್ಯೂ ಏನಾದರೂ ಜಾರಿಯಾಗುತ್ತದ ಎಂಬ ಗೊಂದಲದಲ್ಲೇ ಜನ ಇದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧಾಕರ್, ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಮನವಿ ಮಾಡಿರುವ ಸಚಿವ ಸುಧಾಕರ್, ಮತ್ತೆ ನೈಟ್ ಕಫ್ರ್ಯೂ ಮುಗಿದ ಅಧ್ಯಾಯ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸೋಂಕಿನ ತೀವ್ರತೆ ಕಡಿಮೆ ಇದೆ ಎಂದು ತಜ್ಞರು ಹೇಳಿದ್ದಾರೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟಬೇಕಾದರೆ ಎಲ್ಲರೂ ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲನೆ ಮಾಡಬೇಕು. ಸಾಂಸ್ಥಿಕ ಕ್ವಾರಂಟೇನ್ಗೆ ಒಳಗಾಗುವುದಿಲ್ಲ ಎಂದು ಪಟ್ಟು ಹಿಡಿಯುವುದು ಸರಿಯಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲರೂ ಇದಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ರಾಜ್ಯದಲ್ಲಿ ಪುನಃ ನೈಟ್ ಕಫ್ರ್ಯೂ ಇರುವುದಿಲ್ಲ ಎಂದು ಹೇಳಿರುವುದರಿಂದ ಇದು ಮುಗಿದ ಅಧ್ಯಾಯ. ಹೊಸ ವರ್ಷಾಚರಣೆಯನ್ನು ಸರಳವಾಗಿ ಆಚರಿಸುವಂತೆ ಸಾರ್ವಜನಿಕರಲ್ಲಿ ಕೋರಿದರು. ಈಗಾಗಲೇ ಗೃಹ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದೊಂದು ವಿಶೇಷ ಪ್ರಕರಣವಾಗಿರುವುದರಿಂದ ಸಾರ್ವಜನಿಕರು ಕೂಡ ತಮ್ಮ ತಮ್ಮ ಮನೆಯಲ್ಲಿಯೇ ಆಚರಣೆ ಮಾಡುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಈವರೆಗೂ ಬ್ರಿಟನ್ ಮಾದರಿಯ 7 ಪ್ರಕರಣಗಳು ಪತ್ತೆಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 3 ಹಾಗೂ ಶಿವಮೊಗ್ಗದಲ್ಲಿ 4 ಮಂದಿಗೆ ಈ ಸೋಂಕು ಕಾಣಿಸಿಕೊಂಡಿದೆ. ಈ ಸೋಂಕು ಶೇ.70ರಷ್ಟು ಹಬ್ಬುವ ಸಾಧ್ಯತೆ ಇರುವುದರಿಂದ ನಿಯಂತ್ರಣ ಮಾಡಲು ಮಾರ್ಗಸೂಚಿ ಪಾಲನೆ ಮಾಡುವುದು ಅನಿವಾರ್ಯ ಎಂದು ಹೇಳಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments