ಬೆಂಗಳೂರು : ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರದಲ್ಲಿ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೇ ರಂಗೇರುತ್ತಲೇ ಇದೆ. ಚುನಾವಣೆಯ ದಿನಾಂಕ ಹತ್ತಿರವಾಗುತ್ತಿದ್ದಂತೆ ಕೊರೋನಾ ಸಮಯದಲ್ಲೂ ಜಿದ್ದಿಗೆ ಬಿದ್ದವರಂತೆ ಪ್ರಚಾರ ನಡೆಸುತ್ತಿದ್ದಾರೆ. ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳಿಗೆ ಬೈ – ಎಲೆಕ್ಷನ್ ಪ್ರತಿಷ್ಟೆಯ ಕಣವಾಗಿ ಮಾರ್ಪಟ್ಟಿದೆ.
ಆರ್ ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಹಿಂಪಡೆಯುವ ಸಮಯಾವಕಾಶ ಮುಕ್ತಾಯವಾಗಿದ್ದು ಸುಮಾರು 6 ಅಭ್ಯರ್ಥಿ ಗಳು ನಾಮಪತ್ರ ಹಿಂಪಡೆದಿದ್ದಾರೆ. ಇದರಲ್ಲಿ ಮುನಿರತ್ನ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಕೂಡಾ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.
ಆರ್ ಆರ್ ನಗರ ಕ್ಷೇತ್ರದಲ್ಲಿ ಸಿ.ಆನಂದನ್ ,ಆರ್ ಕುಮಾರ್ , ಮುನಿರತ್ನ ಮತ್ತು ಮುನಿರತ್ನಮ್ಮ ಎಂಬುವವರು ತಮ್ಮ ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ. ಇನ್ನು ಶಿರಾ ಕ್ಷೇತ್ರದಲ್ಲಿ ನಿಸಾರ್ ಅಹಮದ್ , ತಿಮ್ಮರಾಜು ಗೌಡ ತಮ್ಮ ನಾಮಾಪತ್ರ ವಾಪಾಸ್ ಪಡೆದಿದ್ದಾರೆ.
ಪ್ರಸ್ತುತ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ 16 ಮತ್ತು ಶಿರಾ ಕ್ಷೇತ್ರದಲ್ಲಿ 15 ಮಂದಿ ಅಭ್ಯರ್ಥಿ ಗಳು ತಮ್ಮ ರಾಜಕೀಯ ಪರೀಕ್ಷೆ ಎದುರಿಸಲಿದ್ದಾರೆ.
ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ , ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಸೇರಿದಂತೆ 16 ಅಭ್ಯರ್ಥಿಗಳು ಅಖಾಡಕ್ಕಿಳಿದಿದ್ದರೆ ಇತ್ತ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ ಗೌಡ ಮತ್ತು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಸೇರಿದಂತೆ 15 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.
ನ.3ರಂದು ಮತದಾನ ನಡೆಯಲ್ಲಿದ್ದು ನ.10ರಂದು ರಿಸಲ್ಟ್ ಹೊರಬೀಳಲಿದೆ. ಎಲ್ಲಾ ಪಕ್ಷಗಳಿಗೂ ಪ್ರತಿಷ್ಟೆಯ ಕಣವಾಗಿ ಮಾರ್ಪಟ್ಟಿರುವ ಉಪ ಚುನಾವಣೆಯಲ್ಲಿ ವಿಜಯಲಕ್ಷ್ಮಿ ಯಾರ ಕೊರಳಿಗೆ ಕೊರಳೊಡ್ಡಲಿದ್ದಾಳೆ ಎಂದು ಕಾದು ನೋಡಬೇಕಿದೆ.